1:58 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಲೆ, ಸಂಸ್ಕೃತಿ ಬೆಳೆದರೆ ಮಾತ್ರ ನಾಡಿನ ಅಭಿವೃದ್ಧಿ; ಬರೇ ಕಟ್ಟಡ, ರಸ್ತೆಯಿಂದ ಸಾಧ್ಯವಿಲ್ಲ: ಸಚಿವ ಸುನಿಲ್ ಕುಮಾರ್

17/10/2021, 11:01

ಕಾರ್ಕಳ(reporterkarnataka.com): ಪುಸ್ತಕ ಓದುವ ಹವ್ಯಾಸ ಕಡಿಮೆಯಾದರೂ, ಇದೀಗ ಮೊಬೈಲ್ ಮೂಲಕವೂ ಸಾಹಿತ್ಯವನ್ನು ಓದುವವರಿದ್ದಾರೆ. ಹೀಗಾಗಿ ಓದುವ ಸಂಸ್ಕೃತಿ ಜೀವಂತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.               

ಇಲ್ಲಿನ ಹೊಟೇಲ್ ಪ್ರಕಾಶ್‌ನ ಉತ್ಸವ ಸಭಾಂಗಣದಲ್ಲಿ ದಿ. ಪ್ರೊ.ಎಂ ರಾಮಚಂದ್ರ ವೇದಿಕೆಯಲ್ಲಿ ಸಾಹಿತ್ಯ ಸಂಘದ ಬೆಳ್ಳಿಹಬ್ಬ ವರ್ಷಾಚರಣೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ರಾಜ್ಯದ ಊರಿನ ಅಭಿವೃದ್ಧಿ ಅಂದರೆ ಅಲ್ಲಿನ ಕಟ್ಟಡ, ರಸ್ತೆ, ಸೇತುವೆ ಮಾತ್ರವಲ್ಲ. ಅಲ್ಲಿ ಕಲೆ, ಸಂಸ್ಕೃತಿ ಬೆಳೆಸುವ ಕೆಲಸ ನಡೆಯಬೇಕು. ಈ ದೃಷ್ಟಿಯಲ್ಲಿ ಸಾಹಿತ್ಯ ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು ನೀಡಿದ ಕೊಡುಗೆ ಅನನ್ಯವಾದುದು ಎಂದರು. 

ಯುವ ಸಾಹಿತಿಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಅಭಿರುಚಿ ಹೆಚ್ಚಿಸಲು ಹಾಗೂ ಜನರ ನಡುವೆ ಸಾಹಿತ್ಯವನ್ನು ಕೊಂಡೊಯ್ಯಲಾಗುವುದು ಎಂದ ಅವರು

ಭವಿಷ್ಯದ ದಿನಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಒಂದು ಸೀಮಿತ ಪ್ರದೇಶಕ್ಕೆ ಸೀಮಿತಗೊಳಿಸದೆ ಜನರ ನಡುವೆ ಕೊಂಡೊಯ್ಯುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಲಿದೆ. ಕಾರ್ಕಳ ಸಾಹಿತ್ಯ ಸಂಘದ ಪ್ರೇರಣೆ ಮತ್ತು ಮಾದರಿಯನ್ನು ಅನುಸರಿಸಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದರು. 

ರಾಜ್ಯೋತ್ಸವ ಪ್ರಶಸ್ತಿ ಬಯಸಿ ಈ ಬಾರಿ 28ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ. ಅವುಗಳಲ್ಲಿ 66 ಅರ್ಜಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅಂತಿಮ ಆಯ್ಕೆ ದೊಡ್ಡ ಸವಾಲಾಗಿದೆ ಎಂದರು.

ಮಂಗಳೂರು ಶ್ರೀ ರಾಮಕೃಷ್ಷ ಮಠದ ಸ್ವಾಮಿ ಜಿತಕಾಮಾನಂದಜೀ ಅಶಿರ್ವಚನ ನೀಡಿ ಸಮಾಜ ಬದಲಾವಣೆಯಲ್ಲಿ ಸಾಹಿತ್ಯ ಕೊಡುಗೆ ಇದೆ. ಸಾಹಿತ್ಯ ಎಂದರೆ ಆಧ್ಯಾತ್ಮವೇ ಆಗಿದೆ ಎಂದರು.  ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಸನ್ಮಾನಿಸಲಾಯಿತು.  

ಮುಂಬೈ ವಿವಿಯ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿ ಸಮಿತಿ ಅಧ್ಯಕ್ಷ ಡಾ. ಮೊಹನ್ ಆಳ್ವ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಕೆ.ಪಿ.ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು