7:25 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಲಬುರಗಿ: ಲೋಕಾಯುಕ್ತ ದಾಳಿ; ಲಂಚ ಪಡೆಯುವಾಗಲೇ ಎಎಸ್‌ಐ, ಲೇಡಿ ಕಾನ್ಸ್‌ಟೇಬಲ್ ಲಾಕ್!

07/06/2026, 19:20

ಕಲಬುರಗಿ(reporterkarnataka.com): ಪೊಲೀಸ್ ಠಾಣೆಯಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಎಎಸ್‌ಐ ಮತ್ತು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಲೋಕಾಯುಕ್ತ ಬಳಿ ಲಾಕ್​ ಆಗಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್​ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಸಿಪಿಐ ಅರುಣ್ ಕುಮಾರ್ ಮುರಗುಂಡಿ ನೇತೃತ್ವದಲ್ಲಿ ದಾಳಿ ನಡೆಸಿ ಪಿಎಸ್​ಐ ಮತ್ತು ಮಹಿಳಾ ಕಾನ್ಸ್​ಟೇಬಲ್​​​ ಅವರನ್ನು ರೆಡ್​ ಹ್ಯಾಂಡ್​ ಆಗಿ ಲಾಕ್​ ಮಾಡಿದ್ದಾರೆ.
ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್​ಸ್ಟೇಬಲ್ ಜ್ಯೋತಿ ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ವ್ಯಕ್ತಿಯೊಬ್ಬರ ಬಳಿ ಒಂದು ಸಾವಿರ ಹಣ ಪಡೆದು ಮತ್ತೆ 10 ಸಾವಿರಕ್ಕೆ ಕೊಡುವಂತೆ ಕೇಳಿದ್ದರು. ಬಳಿಕ 10 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲಾಕ್​ ಆಗಿದ್ದು, ಎಎಸ್​ಐ ಶಿವಶರಣಪ್ಪ ಮತ್ತು ಮಹಿಳಾ ಕಾನ್​ಸ್ಟೇಬಲ್​ ಜ್ಯೋತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು