4:45 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

22/12/2024, 22:55

ಕಲಬುರಗಿ(reporterkarnataka.com) ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು‌.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಗತಿಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೇದಿಕೆಯಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಿದರು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಮರೆಯಬೇಡಿ ಎಂದು ಹೇಳಿದರು.
371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದು ಅವರು ನುಡಿದರು.
ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
*ಅನುಭವ ಮಂಟಪ ಪೂರ್ವ ಕ್ಕೆ ಹಣ*
ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು