1:43 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಕಳಪೆ ಕಾಮಗಾರಿ: ನಿರ್ಮಾಣಗೊಂಡು 3 ತಿಂಗಳಲ್ಲೇ ಮಳೆಗೆ ಕೊಚ್ಚಿ ಹೋದ ಗೋಪಾನಹಳ್ಳಿ ಚೆಕ್ ಡ್ಯಾಮ್!

22/11/2021, 16:23

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸಮೀಪ ಗೊಲ್ಲರ ಕರಿಯಣ್ಣ ತೋಟದ ಬಳಿ ರಾಣೀಕೆರೆಗೆ ನೀರು ಹರಿಯುವ ಗರಣಿ ಹಳ್ಳಕ್ಕೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ  ಚೆಕ್ ಡ್ಯಾಂ ಕಾಮಗಾರಿ ಪೂರ್ಣಗೊಂಡು ಇನ್ನು ಮೂರು ತಿಂಗಳು ಕಳೆದಿಲ್ಲ ಕಳೆದ 15 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಸಿಲುಕಿ ಚೆಕ್ ಡ್ಯಾಂ ಗೋಡೆ ಕುಸಿದು ನೀರಲ್ಲಿ ಕೊಚ್ಚಿ ಹೋಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಬರದ ನಾಡಲ್ಲಿ ಅಂತರ್ಜಲ ಹೆಚ್ಚಿಸಲು, ನೀರಿನ ಬವಣೆ ನೀಗಿಸಲು ಹತ್ತಾರು ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಚೆಕ್ ಡ್ಯಾಂ ಗಳ ಮೂಲಕ ನೀರು ನಿಲ್ಲಿಸೋಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ. ಆದ್ರೆ ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳ ಬೇಜವಾಬ್ದಾರಿತನಕ್ಕೆ ಸರ್ಕಾರದ ಲಕ್ಷಾಂತರ ರೂಪಾಯಿ ಹಣ  ಒಂದೆ ಮಳೆಗೆ ಕಿತ್ತು ಹೋಗಿರುವುದರಿಂದ ಕಳಪೆ ಗುಣಮಟ್ಟ ಬಯಲಾಗಿದೆ.    

ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜುಲ್ಲೆಯಲ್ಲಿ ಅಂತರ್ಜಲ ವೃದ್ದಿಗಾಗಿ ಹಾಗೂ ಜಲ ಮರು ಪೂರಣಕ್ಕಾಗಿ ಸರ್ಕಾರ ವಿಶೇಷ ಅನುದಾನ ಬಿಡುಗಡೆಗೊಳಿಸಿ ಈ  ಕಾಮಗಾರಿಯನ್ನ ಸಣ್ಣ ನೀರಾವರಿ ಇಲಾಖೆಗೆ ಹಣ ಬಿಡುಗಡೆ ಮಾಡಿ ಕಾಮಗಾರಿ ನಿರ್ಮಿಸೋಕೆ ಅನುಮೋದನೆ ನೀಡಿದೆ. ಆದರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳ  ನಿರ್ಲಕ್ಷ್ಯದಿಂದ ಗುತ್ತಿಗೆದಾರ ಕಳಪೆ ಕಾಮಾಗಾರಿಯಿಂದಾಗಿ  ಸೂಮಾರು 70 ಲಕ್ಷ ರೂ ವೆಚ್ಚದ ಚೆಕ್ ಡ್ಯಾಂ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಸಾವಿರಾರು  ರೈತರ ಕನಸಿಗೆ ಬರೆ ಎಳೆದಂತಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರ ವಿರುದ್ದ ಹಿಡಿಶಾಪ ಹಾಕುವ ಮೂಲಕ ಸಂಬಂಧ ಪಟ್ಟ ಅಧಿಕಾರಿ ಹಾಗೂ ಗುತ್ತಿಗೆ ದಾರರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು