ಇತ್ತೀಚಿನ ಸುದ್ದಿ
ಕಳಸ: ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಭಸ್ಮ; ಬೆಂಕಿ ನಂದಿಸಲು ಹರಸಾಹಸ
09/02/2025, 20:34
![](https://reporterkarnataka.com/wp-content/uploads/2025/02/IMG-20250209-WA0019.jpg)
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಕರಕಲಾಗಿದೆ.
ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ. ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ಉಂಟಾಗಿದೆ.
ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ.