2:35 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಳವಾರು ಸಂತ ಜೋಸೆಫರ ದೇವಾಲಯ: 242ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ

27/03/2026, 20:45

ಮಂಗಳೂರು(reporterkarnataka.com): ಸಂತ ಜೋಸೆಫರ ದೇವಾಲಯ, ಕಳವಾರು, ಪೆಜಾರ್ ಇಲ್ಲಿ ಸುಮಾರು ಎರಡುವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟ ಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಪವಿತ್ರ ಶಿಲುಬೆಯ ಹಾದಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಈ ವರ್ಷ 242ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿಯನ್ನು ನಡೆಸಲಾಗುತ್ತದೆ.
2026ನೇ ಸಾಲಿನ ಶಿಲುಬೆಯ ಹಾದಿ ಕಾರ್ಯಕ್ರಮ ಮಾರ್ಚ್ 31ರಂದು ಮಂಗಳವಾರ ಸಂಜೆ 5 ಗಂಟೆಗೆ ನಡೆಯಲಿದೆ.
ಈ ವರ್ಷದ ವಿಷಯ: ಯಾತನೆ ಪಡುವ ಪ್ರಭು ಕ್ರಿಸ್ತರ ಶರೀರವನ್ನು ಸ್ಪರ್ಶಿಸಲು ಯಾತ್ರಿಕ ಪಯಣ ಎಂಬುದಾಗಿದೆ.
ಆ ದಿನ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆ ತನಕ ನಿರಂತರ ಪ್ರಾರ್ಥನೆ, ಸ್ತುತಿ ಆರಾಧನೆ ಮತ್ತು ದೇವರ ವಾಕ್ಯದ ಮನನ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾರಿಸ್ಮಾಟಿಕ್ ಸಂಚಾಲನವು ಈ ಕಾರ್ಯಕ್ರಮವನ್ನು ನಡೆಸಿ ಕೊಡಲಿದೆ. 3 ಗಂಟೆಗೆ ದೇವರ ಕೃಪೆಯ ಭಕ್ತಿಯಾಚರಣೆ ನಡೆಯಲಿದೆ. 3.30ಕ್ಕೆ ಪರಮ ಪವಿತ್ರ ಪ್ರಸಾದದ ಆರಾಧನೆ ನಡೆಯಲಿದ್ದು, ಆಂತರಿಕ ಆರೋಗ್ಯಕ್ಕಾಗಿ ಪ್ರಾರ್ಥನೆ ನಡೆಯುವುದು. ಇದನ್ನು ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾರಿಸ್ಮಾಟಿಕ್ ಸಂಚಾಲನದ ನಿರ್ದೇಶಕ ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಅವರು ನಡೆಸಿ ಕೊಡುವರು.
ಸಂಜೆ 5 ಗಂಟೆಗೆ ಪವಿತ್ರ ಬಲಿಪೂಜೆ ನಡೆಯಲಿದೆ. ಸಂಜೆ 6 ಗಂಟೆಗೆ ಶಿಲುಬೆಯ ಹಾದಿ ಹಾಗೂ ಬಳಿಕ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರಿಂದ ಪ್ರವಚನ ಇರುತ್ತದೆ. ರಾತ್ರಿ 9 ಗಂಟೆ ವೇಳೆಗೆ ಕಾರ್ಯಕ್ರಮ ಮುಕ್ತಾಯ ಗೊಳ್ಳುತ್ತದೆ. ಬಳಿಕ ವಿಶ್ವಾಸಿಗಳಿಗೆ ಊಟದ ವ್ಯವಸ್ಥೆ ಇರುತ್ತದೆ.
ಪಾದಯಾತ್ರೆ: ಈ ಚಾರಿತ್ರಿಕ ಕಾರ್ಯಕ್ರಮದ ಭಾಗವಾಗಿ ಪಾದ ಯಾತ್ರೆಯು ಅಪರಾಹ್ನ 2.45 ಕ್ಕೆ ಬಜಪೆ ಚೆಕ್ ಪೋಸ್ಟ್ ಬಳಿಯಿಂದ ಕಳವಾರು ಚರ್ಚ್ ಗೆ ಹಾಗೂ ಅಪರಾಹ್ನ 3.30 ಕ್ಕೆ ಜೋಕಟ್ಟೆ ಕೆಬಿಎಸ್ ನಿಂದ ಕಳವಾರು ಚರ್ಚ್ ಗೆ ನಡೆಯಲಿರುವುದು.


241 ವರ್ಷಗಳ ಹಿಂದೆ ವಿಭೂತಿಯ ಬುಧವಾರದಂದು ಈ ಚಾರಿತ್ರಿಕ ಶಿಲುಬೆಯ ಯಾತ್ರೆ ಕಾರ್ಯಕ್ರಮವನ್ನು ಆರಂಭಿಸಲಾಗಿತ್ತು.
ಪತ್ರಿಕಾಗೋಷ್ಠಿಯಲ್ಲಿ ವಂದನೀಯ ಡಾ. ರೊನಾಲ್ಡ್ ಡಿ ಸೋಜಾ (ಧರ್ಮಗುರುಗಳು, ಸಂತ ಜೋಸೆಫರ ಚರ್ಚ್, ಕಳವಾರು), ವಂದನೀಯ ಫಾ. ರುಡಾಲ್ಫ್ ರವಿ ಡೆಸಾ(ವಲಯ ಪ್ರಧಾನ ಗುರುಗಳು, ಪೇಜಾರ್ ವಲಯ), ಕ್ಲಿಫರ್ಡ್ ಡಿ ಸೋಜಾ (ಪಾಲನಾ ಸಮಿತಿಯ ಉಪಾಧ್ಯಕ್ಷರು),ಸಿಲ್ವಿಯಾ ಪೆರಿಸ್ (ಕಾರ್ಯದರ್ಶಿ, ಪಾಲನಾ ಸಮಿತಿ), ವಾಲ್ಟರ್ ಮೊಂತೇರೊ (ಸಿಲಾ ಎಡ್ವರ್ಟೈಸರ್ಸ್), ಎಲಿಯಾಸ್ ಫೆರ್ನಾಂಡಿಸ್ (ಮಾಧ್ಯಮ ಸಲಹೆಗಾರ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು