1:46 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಕಲ್ಬುರ್ಗಿಯಿಂದ ಮಂಗಳೂರಿಗೆ ಶೀಘ್ರ ವಿಮಾನ ಸೇವೆ: 22ರಂದು ಬೆಂಗಳೂರಿನಿಂದ ಮೊದಲ ಯಾನ ಆರಂಭ

21/02/2024, 18:03

ಹೊಸದಿಲ್ಲಿ(reporterkarnataka.com): ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದರು.
ನವದೆಹಲಿಯಲ್ಲಿ ಫೆಬ್ರವರಿ 20ರಂದು ಲೋಕಸಭಾ ಸದಸ್ಯರ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ಡಾ.ಸದಾನಂದ ಪೆರ್ಲ ಅವರು ಸಲ್ಲಿಸಿದ ಮನವಿ ಪತ್ರಕ್ಕೆ ಸ್ಪಂದನೆ ನೀಡಿ ಈ ವಿಷಯ ತಿಳಿಸಿದರು.
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸೌಲಭ್ಯ ಪ್ರಾರಂಭವಾಗಿರುವುದರಿಂದ ಮಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಸೌಲಭ್ಯವನ್ನು ಪ್ರಾರಂಭಿಸಲು ತೀವ್ರ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಇಂಡಿಗೋ ಸೇರಿದಂತೆ ಖಾಸಗಿ ವಿಮಾನ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ನಾಗರಿಕ ವಿಮಾನಯಾನ ಖಾತೆಯ ಅಧಿಕಾರಿಗಳೊಂದಿಗೆ ಚರ್ಚೆ ಪ್ರಗತಿಯಲ್ಲಿದೆ. ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆಯಡಿಯಲ್ಲಿ ಪ್ರಾರಂಭಿಸಿದ ವಿಮಾನ ನಿಲ್ದಾಣಗಳಿಗೆ ಹೆಚ್ಚು ಹೆಚ್ಚು ವಿಮಾನಗಳ ಸಂಪರ್ಕ ಸೇವೆ ಹೊಂದಿ ಆ ಭಾಗದ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡಲು ನಾಗರಿಕ ವಿಮಾನ ಯಾನ ಖಾತೆಯ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಆಸಕ್ತರಾಗಿರುವುದು ಉತ್ತಮ ಬೆಳವಣಿಗೆ ಎಂದು ಡಾ. ಜಾಧವ್ ನುಡಿದರು.
ತಮ್ಮ 5 ವರ್ಷಗಳ ಅವಧಿಯಲ್ಲಿ ವಿಮಾನ ನಿಲ್ದಾಣದ ಪ್ರಗತಿಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು ರಾತ್ರಿ ವಿಮಾನಗಳು ಇಳಿಯುವ ಸೌಲಭ್ಯ ಉತ್ತಮ ಹೆಜ್ಜೆ, ಬೆಂಗಳೂರು – ಕಲಬುರ್ಗಿ ಮಧ್ಯೆ ವಿಮಾನ ಸೇವೆ ಈಗಾಗಲೇ ಆಗಿದ್ದು ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ನಗರಗಳಿಗೆ ಸಂಪರ್ಕ ಕಲ್ಪಿಸುವ ಇಚ್ಛೆ ಹೊಂದಲಾಗಿದೆ ಎಂದು ಹೇಳಿದರು.
ಉಡಾನ್ ಯೋಜನೆಯಡಿ ಪ್ರಧಾನಮಂತ್ರಿಯವರು ಸಣ್ಣ ಸಣ್ಣ ನಗರಗಳಿಗೂ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯಿಂದ ಸಾಮಾನ್ಯ ಜನರು ಕೂಡ ವಿಮಾನ ಸಂಚಾರದ ಲಾಭವನ್ನು ಪಡೆಯುತ್ತಿರುವುದು ಸಂತಸದ ಸಂಗತಿ. ದೇಶದ ಸಾಮಾನ್ಯ ಜನರು ಕೂಡ ವಿಮಾನದಲ್ಲಿ ಸಂಚರಿಸುವ ಕನಸು ಸಾಕಾರಗೊಳ್ಳುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ತಿಳಿಸಿದರು.
ಫೆಬ್ರವರಿ 22ರಂದು ರಾತ್ರಿ 8 ಗಂಟೆಗೆ ಮೊದಲ ವಿಮಾನ ಬೆಂಗಳೂರಿನಿಂದ ಕಲ್ಬುರ್ಗಿಯಲ್ಲಿ ಬಂದು ಇಳಿಯುವ ಸಂದರ್ಭದಲ್ಲಿ ತಾನು ಖುದ್ದಾಗಿ ಹಾಜರಿದ್ದು ಶುಭಕೋರುವವನಿದ್ದೇನೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು