12:09 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟೀಕೆ

14/06/2025, 22:38

Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟೀಕೆ

* ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಸಿಎಂ ಸಿದ್ದರಾಮಯ್ಯ ಯತ್ನ

ಕಲಬುರ್ಗಿ(reporterkarnataka.com): ಕಾಂಗ್ರೆಸ್‌ ಒಂದು ರಾಷ್ಟ್ರೀಯ ಪಕ್ಷವಾಗಿ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ. ಈಗಲೂ ಮೀಸಲಾತಿ-ಜಾತಿ ಗಣತಿ ಎನ್ನುತ್ತ ರಾಜಕೀಯ ಡ್ರಾಮಾ ಮಾಡುತ್ತಿದೆ ಅಷ್ಟೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.

ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡುತ್ತ, ಪಂಡಿತ್‌ ನೆಹರು ಕಾಲದಿಂದಲೂ ಕಾಂಗ್ರೆಸ್‌ ಮೀಸಲಾತಿ ವಿರೋಧಿ ಆಗಿಯೇ ನಡೆದುಕೊಂಡಿದೆ. ಮೀಸಲಾತಿ ವಿರೋಧಿಸಿ ನೆಹರು ಪತ್ರವನ್ನೇ ಬರೆದಿದ್ದರು. ಇನ್ನು, ರಾಜೀವ್‌ ಗಾಂಧಿ ಸಹ ಮೀಸಲಾತಿ ವಿರುದ್ಧ ಸಂಸತ್‌ನಲ್ಲಿ ಸುದೀರ್ಘ ಭಾಷಣ ಬಿಗಿದಿದ್ದರು ಎಂದು ನೆನಪಿಸಿದರು.
ಈಗ ಕಾಂಗ್ರೆಸ್‌ ಮೀಸಲಾತಿ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚಲು ನೋಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಲು ʼಜಾತಿ ಗಣತಿʼ ವಿಷಯ ಹರಿಬಿಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದರು.
ಇತಿಹಾಸದಲ್ಲಿ ಯಾವತ್ತೂ ಕಾಂಗ್ರೆಸ್ ಮುಖಂಡರು ಮೀಸಲಾತಿ ಪರ ನಿಂತಿದ್ದಿಲ್ಲ. ಸಂವಿಧಾನದಲ್ಲಿ ಅಂಬೇಡ್ಕರ್‌ ಮೀಸಲಾತಿ ಕಲ್ಪಿಸಿದರೆ, ಕಾಂಗ್ರೆಸ್‌ ಅಧಿನಾಯಕರು ಸಂಸತ್ ನಲ್ಲಿ ಮೀಸಲಾತಿ ವಿರೋಧಿಸಿ ಉದ್ದುದ್ದ ಭಾಷಣ ಮಾಡಿದರು. ಈಗ ಜಾತಿ ಗಣತಿ, ಮೀಸಲಾತಿ ಎನ್ನುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಲೇವಡಿ ಮಾಡಿದ ಸಚಿವರು, ಇದೊಂದು ರಾಜಕೀಯ ನಾಟಕವಾಗಿದೆ ಎಂದು ಟೀಕಿಸಿದರು.

*ವಿಮಾನ ದುರಂತದ ಸಮಗ್ರ ತನಿಖೆ:*
ವಿಮಾನ ದುರಂತ ದುರದೃಷ್ಟಕರ ಅವಘಡ. ಈ ದುರ್ಘಟನೆಯಲ್ಲಿ ಅನೇಕರ ಸಾವು ಸಂಭವಿಸಿರುವುದು ತೀವ್ರ ದುಃಖ ತರಿಸಿದೆ. ವಿಮಾನ ದುರಂತ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಡಿಜಿಸಿಎ ಸಮಗ್ರ ತನಿಖೆ ನಡೆಸಲಿದೆ. ಭವಿಷ್ಯದಲ್ಲಿ ಇಂಥ ಅವಘಡಗಳು ಘಟಿಸದಂತೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಗವಂತ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಕೇಂದ್ರ ಸರ್ಕಾರ, ವಿಮಾ ಕಂಪನಿ ಮತ್ತು ವಿಮಾನ ಸಂಸ್ಥೆಗಳಿಂದ ಸಮರ್ಪಕ ಪರಿಹಾರ ನೀಡಲಾಗುತ್ತದೆ. ಅಲ್ಲದೇ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು