8:37 PM Saturday7 - February 2026
ಬ್ರೇಕಿಂಗ್ ನ್ಯೂಸ್
NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್

ಇತ್ತೀಚಿನ ಸುದ್ದಿ

ಕಳೆದ 1 ವರ್ಷದಿಂದ ರಾಜ್ಯ ಸರಕಾರ ಒಂದು ರೂಪಾಯಿ ಅನುದಾನ ನೀಡಿಲ್ಲ: ಮಂಗಳೂರು ಮೇಯರ್

10/09/2024, 13:17

ಮಂಗಳೂರು(reporterkarnataka.com): ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಒಂದೇ ಒಂದು ರೂಪಾಯಿ ಅನುದಾನ ಬಂದಿಲ್ಲ. ಸಚಿವ ಬೈರತಿ ಸುರೇಶ್ ಬಂದು 75 ಕೋಟಿ ರೂ. ಅನುದಾನ ಕೊಡುತ್ತೇವೆ. ಮತ್ತೊಂದು ಸಲ 75 ಕೋಟಿ ರೂ. ಅನುದಾನ ಕೊಡುತ್ತೇವೆ ಎಂದಿದ್ದಾರೆ. ಇಲ್ಲಿಯವರೆಗೂ ಸರ್ಕಾರದಿಂದ ಒಂದೇ ಒಂದು ರುಪಾಯಿ ಅನುದಾನ ಬಂದಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ವರ್ಗಾವಣೆಯಂತೂ ಸಾಕಷ್ಟು ದಂಧೆ ರೂಪದಲ್ಲಿ ನಡೆದಿದೆ. 16 ತಿಂಗಳಲ್ಲಿ ಯಾವುದೇ ವಿಶೇಷ ಅನುದಾನ ಸರ್ಕಾರ ನೀಡಲಿಲ್ಲ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಮಾಡಿದ ಯೋಜನೆಗಳ ಕಾಮಗಾರಿಯನ್ನು ಈ ಸರ್ಕಾರ ನಿಲ್ಲಿಸಿಬಿಟ್ಟಿದೆ ಎಂದು ಆರೋಪಿಸಿದರು.
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಜಾಗದ ಗೈಡ್‌ಲೈನ್ಸ್ ವ್ಯಾಲುವನ್ನು ಹೆಚ್ಚಳ ಮಾಡಿದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆಯ ಖಾಲಿ ಜಾಗಕ್ಕೆ ಹಾಕುವ ತೆರಿಗೆಯಲ್ಲಿ ಹೆಚ್ಚಳವಾಗಿರುವುದನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಜಾಗಕ್ಕೆ ಶೇ.0.20 ಇದ್ದ ತೆರಿಗೆಯನ್ನು ಶೇ.0.50ಕ್ಕೆ ಏರಿಕೆ ಮಾಡಲಾಗಿದೆ. ಆದರೆ ನಾವು ಅದನ್ನು ಶೇ.0.10ಕ್ಕೆ ಇಳಿಸಲು ಪ್ರತಿಪಕ್ಷದ ಸದಸ್ಯರ ಜತೆಗೆ ಸಭೆ ನಡೆಸಿ ನಿರ್ಧಾರಕ್ಕೆ ಬಂದಿದ್ದು, ಇದನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡುತ್ತೇವೆ. ಇದಕ್ಕೆ ಪ್ರತಿಪಕ್ಷದ ಸದಸ್ಯರು ಕೂಡ ನಮ್ಮ ಜತೆಗೆ ಬಂದು ನಗರಾಭಿವೃದ್ಧಿ ಸಚಿವ, ಇಲಾಖೆಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಸ್ವಯಂಘೋಷಿತ ಆಸ್ತಿ ತೆರಿಗೆ ಬಂದ ಬಳಿಕ ಪ್ರತಿ ವರ್ಷವೂ ಶೇ.5ರಷ್ಟು ತೆರಿಗೆ ಹೆಚ್ಚಳ ಮಾಡುವುದು ಕಾನೂನಿನಲ್ಲಿಯೇ ಇದೆ. ನಮ್ಮ ಅವಧಿಯಲ್ಲೂ 3 ವರ್ಷದಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿದ್ದೇವೆ. ಈ ಹಿಂದೆ ಎರಡು ಬಾರಿ ಕಾಂಗ್ರೆಸ್ ಅಧಿಕಾರ ಇದ್ದಾಗ ಕೂಡ ಹೆಚ್ಚಳ ಮಾಡುವ ಕೆಲಸವಾಗಿದೆ ಮೇಯರ್ ತಿಳಿಸಿದರು.
ಉಪ ಮೇಯರ್ ಸುನೀತಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ವರುಣ್ ಚೌಟ, ಲೋಹಿತ್, ಗಣೇಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು