ಇತ್ತೀಚಿನ ಸುದ್ದಿ
ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನ ಅಟ್ಟಾಡಿಸಿ ಹಲ್ಲೆ ನಡೆಸಿದರು: ಮೂಡಿಗೆರೆ ಶಾಸಕ ಕುಮಾರಸ್ವಾಮಿ
22/11/2022, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈನಲ್ಲೂ ದೊಣ್ಣೆ ಇತ್ತು. ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನ ಅಟ್ಟಾಡಿಸಿದರು. ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹೇಳಿದರು.
ಮಾಧ್ಯಮ ಜತೆ ಮಾತನಾಡಿದ ಅವರು, ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ತುಂಬಾ ಕಲ್ಲು ಹೊಡೆದರು.
ಬನಿಯನ್ ಇತ್ತು ಬಟ್ಟೆ ಹರಿದದ್ದು ಕಾಣಲಿಲ್ಲ, ಬನಿಯನ್ ತೆಗೆದರೆ ಹರಿದದ್ದು ಕಾಣುತ್ತೆ. ಬಟ್ಟೆ ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ ಎಂದು ಪ್ರಶ್ನಿಸಿದರು.
ಬರೀ ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ.
ರಾಜಕೀಯವಾಗಿ ಚುನಾವಣೆಗೆ ನಿಲ್ಲಬಾರದು ಅಂತ ವ್ಯವಸ್ಥಿತ ಹಲ್ಲೆ ನಡೆಸಿದ್ದಾರೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಅವರು ನುಡಿದರು.
ನಾನು ಒಂದೇ ಒಂದು ಮಾತನಾಡಿಲ್ಲ, ಬಹಳ ಸಂಚು ಮಾಡಿ ಹಲ್ಲೆ ಮಾಡಿದ್ದಾರೆ.
ನನ್ನ ಮೂಲಕ ಎಲ್ಲಾ ಶಾಸಕರಿಗೂ ಸರ್ಕಾರ ಭದ್ರತೆ ನೀಡಬೇಕು. ನಾನು ಕಾಡು ಕಾಯಲ್ಲ, ಆನೆ ಸಾಕಿಲ್ಲ, ಸರ್ಕಾರಕ್ಕೆ ದೂರು ನೀಡಬಹುದು, ನೀಡುತ್ತೇನೆ ಎಂದು ಅವರು ನುಡಿದರು.
ನಾನು ಕೋರ್ಟ್ ಅಲ್ಲ, ಕ್ಷೇತ್ರಕ್ಕೆ ಸಾಕಷ್ಟು ಹಣ ತಂದಿದ್ದೇನೆ.
ಇಂದು ಹೋಗಿ ಎಲ್ಲರಿಗೂ ಸಾಂತ್ವನ ಹೇಳಿದ್ದೇನೆ.
ಆನೆ ಸ್ಥಳಾಂತರಕ್ಕೆ ನಾಳೆಯೇ ಕ್ರಮ ಕೈಗೊಳ್ಳುತ್ತೇವೆ, ಬೆಂಗಳೂರಿಗೆ ಹೋಗುತ್ತೇನೆ. ಈ ಬಗ್ಗೆ ವರಿಷ್ಟರು, ಸಿಎಂ, ಗೃಹ ಮಂತ್ರಿ ಗಮನಕ್ಕೆ ತರುತ್ತೇನೆ ಎಂದರು.