4:11 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Kalladka | ಪ್ರಚೋದನಕಾರಿ ಭಾಷಣ ಆರೋಪ: ಆರೆಸ್ಸೆಸ್ ನಾಯಕ ಡಾ. ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು

02/06/2025, 20:19

ಬಂಟ್ವಾಳ(reporterkarnataka.com): ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರೆಸ್ಸೆಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ.
ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮ ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದಿರುತ್ತದೆ. ಈ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ರವರು ಭಾಗವಹಿಸಿದ್ದು, ಪ್ರಭಾಕರ್ ಭಟ್ ರವರು ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ, ಕಲ್ಲಡ್ಕ ಪ್ರಭಾಕರ್ ಭಟ್ ರವರ ವಿರುದ್ದ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು