2:10 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಕಲ್ಲಡ್ಕ: ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರು 169ನೇ ಜನ್ಮದಿನಾಚರಣೆ

25/12/2023, 13:34

ಬಂಟ್ವಾಳ (reporterkarnataka.com):ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ, ವೀರಕಂಬ, ಅಮ್ಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ)ಕಲ್ಲಡ್ಕ ವಲಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಕಲ್ಲಡ್ಕದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಮಾಜಿ ಶಾಸಕ ರುಕ್ಮಯ ಪೂಜಾರಿ ಏಳ್ತೀಮಾರ್ ಅವರ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ಬಂಟ್ವಾಳ ಹಿರಿಯ ಮೋಟರ್ ವಾಹನ ನಿರೀಕ್ಷಕರಾದ ಚರಣ್ ಕೆ. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ಬಿಲ್ಲವ ಸಮುದಾಯದ ಯುವ ಜನತೆ ಉತ್ತಮ ವಿದ್ಯಾವಂತರಾಗುತ್ತಿದ್ದಾರೆ. ಆದರೆ ಅವರಲ್ಲಿ ಉತ್ತಮ ಸಂಸ್ಕಾರದ ಗುಣದ ಕೊರತೆ ಎದ್ದು ಕಾಣುತ್ತಿದೆ. ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಬೇಕು. ನಾರಾಯಣ ಗುರುವರ್ಯರ ಜನ್ಮ ದಿನಾಚರಣೆ ಜಾತಿಗೆ ಸೀಮಿತವಾಗದೆ ಸಮಾಜದ ಎಲ್ಲರೂ ಸೇರಿಸಿಕೊಂಡು ಆಚರಿಸಬೇಕು ಎಂದರು. ಮುಖ್ಯ ಅತಿಥಿಗಳಾದ ಕುದ್ರೋಳಿ ಗೋಕರ್ನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಅರ್, ಬಿಲ್ಲವರು ಪಕ್ಷಬೇಧ ಮರೆತು ತಮ್ಮೊಳಗಿನ ವೈ ಮನಸನ್ನು ಬಿಟ್ಟು ಒಟ್ಟಾಗಬೇಕು. ನಾರಾಯಣ ಗುರುಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅವಲಾಡಿಸಿಕೊಳ್ಳಬೇಕು ಎಂದರು.
ಕೇಶವ ಶಾಂತಿ ನರಿಕೊಂಬು ಪುರೋಹಿತ್ಯದಲ್ಲಿ ನಾರಾಯಣ ಗುರುಪೂಜೆ ಹಾಗೂ ಶ್ರೀ ಶಾರದಾಂಬ ಭಜನಾ ಮಂದಿರ ಶೃಂಗ ಗಿರಿ ಗುಂಡಿಮಜಲು ಇವರಿಂದ ಭಜನಾ ಸಂಕೀರ್ತನೆ ನೆರೆವೇರಿತು. ಕಾರ್ಯಕ್ರಮದಲ್ಲಿ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ಕೆ. ಅಣ್ಣು ಪೂಜಾರಿ, ಗೋಳ್ತಮಜಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರೇಮಾ ಪುರುಷೋತ್ತಮ, ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತ ಸುರೇಶ್, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ್ ಬಂಗೇರ, ಪದವಿ ಪರೀಕ್ಷೆಯಲ್ಲಿ ಮಂಗಳೂರು ಯುನಿವರ್ಸಿಟಿಯಲ್ಲಿ ನಾಲ್ಕನೇ ರಾಂಕ್ ವಿಜೆತೆ ವಿದ್ಯಾರ್ಥಿನಿ ನಿರೀಕ್ಷಾ ಅರೆಬೆಟ್ಟು ಮೊದಲಾದವರನ್ನು ಸನ್ಮಾನಿಸಲಾಯಿತು. ಬಿಲ್ಲವ ಬಾಂಧವರಿಗಾಗಿ ನಡೆದ ಬಿಲ್ಲವ ಕ್ರೀಡಾಕೂಟ -2023 ರ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಕಲ್ಲಡ್ಕ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೊಸಕಟ್ಟ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚೆನ್ನಪ್ಪ ಕೋಟ್ಯಾನ್,ಉದ್ಯಮಿ ಮಂಜುನಾಥ ಮುಲಾರು, ಉದ್ಯಮಿ ಮಿಥುನ್ ಪೂಜಾರಿ ಹೊಸಮನೆ, ಮಾಜಿ , ಅಮ್ಮ್ಟೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶರತ್ ಕುಮಾರ್, ಹಿರಿಯರಾದ ತಿಮ್ಮಪ್ಪ ಪೂಜಾರಿ ವೀರಕಂಭ ಮೊದಲಾದವರು ಉಪಸ್ಥಿತರಿದ್ದರು. ವಂಶಿ ತೋಟ ಪ್ರಾರ್ಥಿಸಿದರು. ವಸಂತ ಬಟ್ಟಹಿತ್ಲು ಸ್ವಾಗತಿಸಿದರು. ಬಿಲ್ಲವ ಸಂಘದ ಮಹಿಳಾ ಅಧ್ಯಕ್ಷೆ ಪುಷ್ಪ ಸತೀಶ್ ಬಹುಮಾನ ಪಟ್ಟಿ ವಾಚಿಸಿದರು. ಯೋಗೀಶ್ ತೋಟ ವಂದಿಸಿದರು. ಸಂತೋಷ್ ಬೊಳ್ಪೋಡಿ ಹಾಗೂ ವಸಂತ ಟೈಲರ್ ನೆಟ್ಲ ಕಾರ್ಯಕ್ರಮ ನಿರೂಪಿಸಿದರು. .

ಇತ್ತೀಚಿನ ಸುದ್ದಿ

ಜಾಹೀರಾತು