1:29 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಲ್ಲಡ್ಕ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು: ಕಾಲೇಜಿಗೆ ಹೊರಟವಳು ಮನೆಗೆ ಹಿಂತಿರುಗಿ ಆತ್ಮಹತ್ಯೆ

09/03/2023, 22:06

ಬಂಟ್ವಾಳ(reporterkarnataka.com):
ಕಲ್ಲಡ್ಕದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ವೈಷ್ಣವಿ(18) ಎಂದು ಗುರುತಿಸಲಾಗಿದೆ. ಈಕೆ ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಯ ಪುತ್ರಿ.

ವೈಷ್ಣವಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಈ ಹಿಂದೆ ಭಗವದ್ಗೀತೆಯ 700 ಶ್ಲೋಕವನ್ನು ಕಂಠಪಾಠ ಮಾಡಿ ಹೇಳುವ ಸ್ಪರ್ಧೆಯಲ್ಲಿ ಜಿಲ್ಲಾ ಪ್ರಶಸ್ತಿ ಪಡೆದಿದ್ದಳು. ಕಾಲೇಜಿಗೆಂದು ಹೊರಟ ವೈಷ್ಣವಿ ಮನೆಗೆ ಹಿಂದಿರುಗಿ ಬಂದಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೆ ನೈಜ ಕಾರಣವೇನು ಎಂಬ ಬಗ್ಗೆ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು