ಇತ್ತೀಚಿನ ಸುದ್ದಿ
ಕಲ್ಲಡ್ಕ ಪೇಟೆಯಲ್ಲಿ ಭಾರೀ ಟ್ರಾಫಿಕ್ ಜಾಮ್: ಮೆಲ್ಕಾರ್ ವರೆಗೆ ಸಾಲುಗಟ್ಟಿ ನಿಂತಿದ್ದ ವಾಹನಗಳು!!
08/07/2022, 13:59
ಬಂಟ್ವಾಳ:(Reporterkarnataka.com
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಬಿರುಸಿನ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಪೇಟೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ತಾಸುಗಟ್ಟಲೆ ಪರದಾಡಬೇಕಾಯಿತು.
ಟ್ರಾಫಿಕ್ ಜಾಮ್ ತೀವ್ರತೆ ಎಷ್ಟಿತ್ತೆಂದರೆ ಕಲ್ಲಡ್ಕ ಪೇಟೆಯಿಂದ ಮೆಲ್ಕಾರ್ ವರೆಗೆ ರಸ್ತೆಯ ಮಧ್ಯದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಬದಿಯಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಹೊಂಡಗಳನ್ನು ತೋಡಿ ರಸ್ತೆ ಬದಿಯಲ್ಲಿ ಮಣ್ಣು ಹಾಕಲಾಗಿದೆ.