6:19 AM Wednesday4 - December 2024
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ… ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ… ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕನ್ನಡ ಶಾಲೆಗಳಿಗೆ ಸಮ್ಮಾನ; ಮಾತೃ ಭಾಷೆಗೆ ಪ್ರಾಧಾನ್ಯ ಸಿಗಬೇಕು: ಸಿ.ಎ.ಶಾಂತಾರಾಮ ಶೆಟ್ಟಿ

11/11/2024, 15:03

ಬಂಟ್ವಾಳ(reporterkarnataka.com): ಕನ್ನಡ ಭಾಷೆ ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರಿಗೂ ಇದೆ. ಭಾರತೀಯ‌ ಎಲ್ಲಾ ಭಾಷೆಗಳು ಶ್ರೀಮಂತವಾಗಿದ್ದು ಮಾತೃ ಭಾಷೆಗೆ ಹೆಚ್ಚಿನ ಪ್ರಾಧಾನ್ಯ ಸಿಗಬೇಕು ಎಂದು ಮಂಗಳೂರಿನ ಲೆಕ್ಕಪರಿಶೋಧಕ ಸಿ.ಎ.ಶಾಂತಾರಾಮ ಶೆಟ್ಟಿ ಹೇಳಿದರು.
ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ವತಿಯಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸಂಘಟಿಸಲಾದ ರಾಜ್ಯದ ಕನ್ನಡ ಶಾಲೆಗಳ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
*ಭಾಷೆ ಸಂಸ್ಕೃತಿಯ ಜೀವಾಳ:*
ಭಾಷೆ ನಾಡಿನ ಸಂಸ್ಕೃತಿ ಯ ಜೀವಾಳ. ಭಾಷೆ ಸತ್ತರೆ ಭಾವನೆಗಳೇ ಸತ್ತಂತೆ. ಭಾವನೆಗಳಿಲ್ಲದೆ ಸಂಬಂಧ, ಶಾಂತಿ, ನೆಮ್ಮದಿ ಉಳಿಯಲು ಸಾಧ್ಯವಿಲ್ಲ. ರಾಷ್ಟ್ರೀಯ ಭಾವನೆಗಳು ಜಾಗೃತ ಗೊಳ್ಳಬೇಕಾದರೆ ಮಾತೃಭಾಷೆಯ ಶಿಕ್ಷಣ ಅನಿವಾರ್ಯ. ಕಳೆದ 60 ವರ್ಷಗಳಿಂದ ಅಭಾಸಾಪ ಸಾಹಿತ್ಯ ಪರಿಷತ್ತು ರಾಷ್ಟ್ರೀಯ ವಿಚಾರಧಾರೆಯಿಂದ ಸಾಹಿತಿಗಳ, ಚಿಂತಕರ ಸಂಘಟನೆಯಲ್ಲಿ ಸರಳ ಕಾರ್ಯಕ್ರಮಗಳ ಮೂಲಕ‌ ತೊಡಗಿಸಿಕೊಂಡಿದೆ ಎಂದು
ಅಭಾಸಾಪ ಕರ್ನಾಟಕ ರಾಜ್ಯ ಸಂಪರ್ಕ ಪ್ರಮುಖ್ ಡಾ.ವಿ.ರಂಗನಾಥ ಮೈಸೂರು ದಿಕ್ಸೂಚಿ ಭಾಷಣ ಮಾಡಿದರು.
*ಕನ್ನಡ ಶಾಲೆಗಳ ಸವಾಲುಗಳು:*
ವಿಚಾರ ಗೋಷ್ಠಿಯಲ್ಲಿ ಕನ್ನಡ ಶಾಲೆಗಳ ಸವಾಲುಗಳು ಮತ್ತು ಸಮಾದಾನಗಳು ಎಂಬ ವಿಷಯದ ಕುರಿತು ಶಿಕ್ಷಣ ತಜ್ಞ ರಾಷ್ಟ್ರೋತ್ಥಾನ ಶಾಲೆ ಹೊಳೆ ಹೊನ್ನೂರಿನ ರಾಜಾರಾಮ ವಿಚಾರ ಮಂಡಿಸಿದರು. ಸ್ವಾಭಿಮಾನ ಭರಿತ ರಾಷ್ಟ್ರ ನಿರ್ಮಾಣವೇ ಶಿಕ್ಷಣ ಅಂತಿಮ ಗುರಿಯಾಗಿರಬೇಕು. ಶಿಕ್ಷಣದ ಚಿಂತನೆ ಇರುವವರು ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿ ಕೊಳ್ಳಬೇಕು. ಕನ್ನಡ ಶಾಲೆಗಳಿಗೆ ಕಲ್ಲಡ್ಕ ಶ್ರೀರಾಮ ಶಾಲೆ ಮಾದರಿಯಾಗಿದೆ ಎಂದರು.
ಶ್ರದ್ಧೆ ಇದ್ದಾಗ ಏಕಾಗ್ರತೆ, ಗ್ರಹಿಕೆ,ಹೇಳುವ ಸಾಮರ್ಥ್ಯ, ಕ್ರಿಯಾಶೀಲತೆಯಿಂದ ಉತ್ತಮ ಫಲಿತಾಂಶ ದೊರಕುತ್ತದೆ. ವಿಷಯಗಳನ್ನುಮಾತೃ ಭಾಷೆಯಲ್ಲಿ ಕಲಿಸುವುವುದರಿಂದ ಭಾವನೆಗಳು ಅರಳಲು ಸಾಧ್ಯ ವಾಗುವುದು ಎಂದು ಉದಾಹರಣೆಗಳ ಮೂಲಕ ತಿಳಿಸಿದರು.
*ಕನ್ನಡ‌ ಭಾಷೆ ಜಗತ್ತಿನ ಭಾಷೆಗಳಿಗೆ ಶಕ್ತಿ ಎಂದ ಡಾ‌.ಪ್ರಭಾಕರ ಭಟ್:*
ಶ್ರೀ ರಾಮನೇ ಈ ದೇಶಕ್ಕೆ ಆದರ್ಶ. ಒಳ್ಳೆಯದರ ಕಡೆಗೆ ಹೋಗುವುದೇ ಭಾರತೀಯತೆ. ದೀಪದಿಂದ ದೀಪ ಹಚ್ಚಿದಂತೆ ಜ್ಞಾನವನ್ನು ಪಸರಿಸಬೇಕು. ಕನ್ನಡ ಭಾಷೆ ಬೆಳೆಸಿದರೆ ಜಗತ್ತಿನ ಭಾಷೆಗಳಗೆ ಶಕ್ತಿ ನೀಡಿದಂತಾಗುತ್ತದೆ. ಭಾರತದಲ್ಲಿ ಕೊನೆಗೆ ಗೆಲ್ಲುವುದು ಧರ್ಮವೇ ಹೊರತು ಅಧರ್ಮವಲ್ಲ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ‌ ಅಧ್ಯಕ್ಷ ಡಾ.ಪ್ರಭಾಕರ ಭಟ್ ಹೇಳಿದರು.
ಅವರು ರಾಜ್ಯದ ಉತ್ತಮ ಕನ್ನಡ ಮಾಧ್ಯಮ ಶಾಲೆಗಳನ್ನು ಅವರು ಸ್ಮರಣಿಕೆ ನೀಡಿ ಅಭಿನಂದಸಿ ಮಾತನಾಡಿದರು.
*ಸಮ್ಮಾನಗೊಂಡ ಶಾಲೆಗಳು:*
ಜ್ಞಾನ ಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆ‌ ಶಹಾಪುರ,ಯಾದಗಿರಿ ಜಿಲ್ಲೆ. ಜೈಹಿಂದ್ ಪ್ರೌಢ ಶಾಲೆ , ಅಂಕೋಲಾ ಉತ್ತರಕನ್ನಡ ಜಿಲ್ಲೆ,ಶಾಂತಿಧಾಮ ಪೂರ್ವ ಗುರುಕುಲ, ಕೋಟೇಶ್ವರ ಉಡುಪಿ ಜಿಲ್ಲೆ, ವನಿತಾ ಸದನ; ಕೃಷ್ಣ ಮೂರ್ತಿಪುರಂ ಮೈಸೂರು, ವಿವೇಕಾನಂದ ಕನ್ನಡ ಮಾಧ್ಯಮ ‌ಶಾಲೆ,ತೆಂಕಿಲ ಪುತ್ತೂರು ದ.ಕ.ಜಿಲ್ಲೆ.
ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ ರೈ ಸ್ವಾಗತಿಸಿದರು. ರಾಜ್ಯ ಕಾರ್ಯದರ್ಶಿ ರಘುನಂದನ್ ಭಟ್, ನಾರಾಯಾಣ ಶೇವಿರೆ ಹಾಗೂ ಪದಾಧಿಕಾರಿಗಳಾದ ಶೈಲೇಶ್ ಮಂಗಳೂರು, ಸುಂದರ ಇಳಂತಿಲ ಉಪಸ್ಥಿತರಿದ್ದರು.
ತಾಲೂಕು ‌ಅಧ್ಯಕ್ಷ ರಾಜಮಣಿ ರಾಮಕುಂಜ ಸ್ವಾಗತಿಸಿದರು. ಕಾರ್ಯದರ್ಶಿ ಮಧುರಾ ಕಡ್ಯ ವಂದಿಸಿದರು.
ಉಪನ್ಯಾಸಕರಾದ ಅಶೋಕ ಕಲ್ಯಾಟೆ, ಡಾ‌.ಮೀನಾಕ್ಷಿ ರಾಮಚಂದ್ರ ನಿರೂಪಿಸಿದರು. ವಿದ್ಯಾ ಶ್ರೀ ಕಡೂರು, ಡಾ.ಕವಿತಾ,ಜಯಾನಂದ ಪೆರಾಜೆ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು