7:17 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿ: ತೈಲ ಟ್ಯಾಂಕರ್ ಸ್ಫೋಟ; ರಸ್ತೆಗೆ ಚೆಲ್ಲಿದ ಆಯಿಲ್; ಸಂಚಾರ ಅಸ್ತವ್ಯಸ್ತ

22/12/2023, 18:39

ಬಂಟ್ವಾಳ(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ ಘಟನೆ ನಡೆದಿದೆ. ಇದರಿಂದ ಹೆದ್ದಾರಿಯಲ್ಲಿ ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು.
ಮಂಗಳೂರಿನಿಂದ ಕಲ್ಲಿದ್ದಲನ್ನು ಹೇರಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಲಾರಿ ನರಹರಿ ಪರ್ವತದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆಯಿತು. ಡಿಕ್ಕಿಯಾದ ರಭಸಕ್ಕೆ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಲಾರಿಗಳೆರಡರ ತೈಲ ತುಂಬಿದ ಟ್ಯಾಂಕ್ ಸ್ಫೋಟಗೊಂಡು ತೈಲ ಪೂರ್ತಿ ರಸ್ತೆಯಲ್ಲಿ ಚೆಲ್ಲಿದ್ದು,ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪರಿಣಾಮ ಒಂದು ಬದಿಯಿಂದ ಮೆಲ್ಕಾರ್ ವರೆಗೂ ಇನ್ನೊಂದು ಬದಿಯಿಂದ ಕಲ್ಲಡ್ಕವರೆಗೂ ವಾಹನಗಳು ಮುಂದೆ ಚಲಿಸಲಾಗದೆ ಸಾಲಿನಲ್ಲಿ ನಿಂತ ದೃಶ್ಯ ಕಂಡು ಬಂತು.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬೇಟಿ ನೀಡಿದ ಟ್ರಾಫಿಕ್ ಎಸ್.ಐ.ಸುತೇಶ್ ಅಗ್ನಿಶಾಮಕ ದಳದವರನ್ನು ಸ್ಥಳಕ್ಕೆ ಕರೆಸಿ ನೀರು ಹಾಯಿಸುವ ಮೂಲಕ ತೈಲವನ್ನು ಶುಚಿಗೊಳಿಸುವ ಕಾರ್ಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು