5:55 PM Friday28 - November 2025
ಬ್ರೇಕಿಂಗ್ ನ್ಯೂಸ್
Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿನಿಯರು ಎಸ್ ಜಿಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆ

06/10/2024, 19:10

ಭೂಪಾಲ್(reporterkarnataka.com): ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯ ಪ್ರದೇಶದ ಮಂಡ್ಸೌರು ನಲ್ಲಿ ಜರಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರ ಲ್ಲಿ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯ 9 ನೇ ತರಗತಿಯ ಅನರ್ಘ್ಯ ಎ. ಆರ್. 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆ ಯ 400 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಚಿನ್ನ 200 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಪರ್ಧೆ ಗೆ ಆಯ್ಕೆಯಾಗಿರುತ್ತಾರೆ.
ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಅನನ್ಯ ಎ ಆರ್ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ 200 ಮೀ ಬಟರ್ ಫ್ಲೈ ಯಲ್ಲಿ ಚಿನ್ನ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಮತ್ತು ಕೆ ಪಿಎಸ್ ಸಿ ಮೊಂಟೆಪದವು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಪುತ್ರಿಯರಾಗಿದ್ದು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ. ನಾಯ್ಕರ ಅವರ ಶಿಷ್ಯಯರಾಗಿದ್ದು ಅಲೋಷಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ಸ್ಯಾಂಜು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು