ಇತ್ತೀಚಿನ ಸುದ್ದಿ
ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸ್ವಚ್ಛತೆಯ ಸೇವೆ ಆಂದೋಲನ ಉದ್ಘಾಟನೆ
28/09/2022, 20:30
ಮೂಡುಬಿದ್ರೆ(reporterkarnataka.com): ಶ್ರೀ ಮಹಾವೀರ ಪದವಿಪೂರ್ವ ಕಾಲೇಜು, ಮೂಡುಬಿದಿರೆ ಹಾಗೂ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತೆಯ ಸೇವೆ ಆಂದೋಲನ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಉದ್ಘಾಟನೆಗೊಂಡಿತು.
ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಪರಿಸರದಲ್ಲಿ ಪ್ಲಾಸ್ಟಿಕ್ ಹೆಕ್ಕುವ ಮೂಲಕ ಕಾರ್ಯ ಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷರಾದ ಕಲ್ಯಾಣಿ ಗೌಡ,ಶ್ರೀ ದುರ್ಗಾ ದೇವಿ ಸಮೂಹ ಸಂಸ್ಥೆ
ಶುಂಟಿಲ ಪದವು ನಿಡ್ಡೋಡಿ ಇದರ ಆಡಳಿತ ಅಧಿಕಾರಿ ರಾಘವೇಂದ್ರ ಭಟ್, ಪಂಚಾಯತ್ ಪಿಡಿಒ ಪ್ರಶಾಂತ್ ಶೆಟ್ಟಿ ಹಾಗೂ ಮಹಾವೀರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಪೂರ್ಣಿಮಾ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.