ಇತ್ತೀಚಿನ ಸುದ್ದಿ
ಕಲ್ಲಾಪುವಿನಿಂದ ಮುಡಿಪು ತನಕ ಕಾಂಗ್ರೆಸ್ ನಿಂದ ಬೃಹತ್ ಕಾಲ್ನಡಿಗೆ ಜಾಥಾ
06/09/2022, 23:37

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭೆ ಕ್ಷೇತ್ರದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಬೃಹತ್ ಕಾಲ್ನಡಿಗೆ ಜಾಥಾ ಮಂಗಳವಾರ ನಡೆಯಿತು.
ಮಧ್ಯಾಹ್ನ 2 ಗಂಟೆಗೆ ಕಲ್ಲಾಪು ಯುನಿಟಿ ಹಾಲ್ ನಿಂದ ಮುಡಿಪು ತನಕ ಕಾಲ್ನಡಿಗೆ ಜಾಥಾ ನಡೆಯಿತು.
ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ‘ಅಮೃತ ಸಂಗಮ 2022’ ಮುಡಿಪುನಲ್ಲಿ ವಿವಿಧ ಜಾನಪದ ಸಾಂಸ್ಕೃತಿಕ ವೈಭವದೊಂದಿಗೆ ಜರುಗಿತು. ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.