7:26 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸಂಭ್ರಮದ  66ನೇ ಕನ್ನಡ ರಾಜ್ಯೋತ್ಸವ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

02/11/2021, 11:58

ಮಂಗಳೂರು(reporterkarnataka news): ಬಂಟ್ವಾಳ ತಾಲೂಕಿನ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ ಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ  ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು.

ಶಿಕ್ಷಕಿ ಮಾಲಿನಿ ಮಾತನಾಡಿ,ಕರ್ನಾಟಕ ಏಕೀಕರಣ ಹೋರಾಟ ,ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ತಿಳಿಸಿದರು.ಶಾಲಾ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.ಕನ್ನಡ ನಾಡುನುಡಿಯನ್ನು ವರ್ಣಿಸುವ ಹಾಡುಗಳನ್ನು ಹಾಡಲಾಯಿತು. ಕನ್ನಡ ರಾಜ್ಯೋತ್ಸವ, ಕರ್ನಾಟಕ ಏಕೀಕರಣ ಹೋರಾಟ, ಕನ್ನಡ ನಾಡು-ನುಡಿಯ ಬಗ್ಗೆ ಸವಿವರವಾಗಿ ಅವರು ಮಕ್ಕಳಿಗೆ ತಿಳಿಸಿದರು.

ಕನ್ನಡ ಭಾಷಾ  ಶಿಕ್ಷಕಿ ಜಯಲಕ್ಷ್ಮಿ ಮಾತನಾಡಿ,ಕನ್ನಡ ಭಾಷೆ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುತ್ತಾ ಕನ್ನಡವನ್ನು ಉಳಿಸುವಲ್ಲಿ ಎಲ್ಲರೂ  ಪ್ರಯತ್ನ ಪಡಬೇಕೆಂದು ತಿಳಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ಕನ್ನಡ  ಶಿಕ್ಷಕಿ ಜಯಲಕ್ಷ್ಮಿ ಎಲ್ಲಾ ಅತಿಥಿಗಳನ್ನು ಕನ್ನಡ ಶಾಲು ಹೊದಿಸುವ ಮೂಲಕ ಸ್ವಾಗತಿಸಿದರು.

ಶಾಲಾ ಶಿಕ್ಷಕರಾದ ಶ್ರೀಯುತ ಪ್ರಭಾಕರ್, ಸಂತೋಷ್ ಕೆ ಪಮ್ಮರ್ , ವಿನಿತ,ಪುಷ್ಪ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು