3:24 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ರಾಷ್ಟ್ರ ನಿರ್ಮಾತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

26/09/2023, 00:13

ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ಪ್ರದಾನ ಮಾಡಲಾಯಿತು.


ರೋಟರಿ ಕ್ಲಬ್ ದೇರಳಕಟ್ಟೆ ಸಂಸ್ಥೆಯ ಆಶ್ರಯದಲ್ಲಿ ಸೆ.24 ರಂದು ಹೋಟೇಲ್‌ ಕಂಪರ್ಟ್ಇನ್ ಸಭಾಂಗಣದಲ್ಲಿ ಜರಗಿದ “ಶಿಕ್ಷಕರ ದಿನಾ ಚರಣೆ” ಯ ಸಮಾರಂಭದಲ್ಲಿ ರೋಟರಿ ಸಂಸ್ಥೆಯ ವೃತ್ತಿಪರ ಸೇವೆಯ ಅಂಗವಾಗಿ ಹಾಗೂ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರು ಸಲ್ಲಿಸಿದ ಅನುಪಮ ಸೇವೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ| ಕೆ.ರವೀಂದ್ರ ಶೆಟ್ಟಿ, ಮಾಜಿ ಗವರ್ನರ್ ಡಾ ದೇವದಾಸ್ ರೈ, ಸಹಾಯಕ ಗವರ್ನರ್‌ರಾರದ ಪಿ.ಡಿ. ಶೆಟ್ಟಿಯವರು,.ಸಂಸ್ಥೆಯ ಅಧ್ಯಕ್ಷೆ ಲತಾ ವಿಕ್ರಮ್, ಕಾರ್ಯದರ್ಶಿ ಸುಜಾತ ಶೆಟ್ಟಿಯವರು, ಚುನಾಯಿತ ಗವರ್ನರ್‌ ವಿಕ್ರಮ್‌ದತ್ತ ಹಾಗೂ ಮಾಜಿ ಅಧ್ಯಕ್ಷರಾದ| ಜೆ.ಪಿ.ರೈಯವರು, ಡಾ l ಅನಂತನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು