1:07 AM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ

27/01/2023, 21:26

ಬಂಟ್ವಾಳ(reporterkarnataka.com): ಸರಕಾರಿ ಪ್ರೌಢಶಾಲೆ ಕಲ್ಲರ ಕೋಡಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಧ್ವಜಾರೋಹಣವನ್ನು ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಅವರು ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನವಾಜ್ ಎಂ.ಬಿ. ಅವರು ಭಾಗವಹಿಸಿದ್ದರು. ವಂದೇ ಮಾತರಂ ಧ್ವಜ ಗೀತೆ ಯನ್ನು ವಿದ್ಯಾರ್ಥಿಗಳು ಹಾಡುವ ಮೂಲಕ ಗೌರವವನ್ನು ಸಲ್ಲಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಮೀರಾರವರು ಸ್ವಾಗತಿಸಿದರು. 10ನೇ ತರಗತಿ ಅಮಿನತ್ ಅಫೀಜಾ ಅವರು ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


2022ನೇ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿ ಗಳಾದ ಮೋಕ್ಷಿತ ,ಆತ್ಮಿಕ, ಮನ್ವಿತ್ ಮತ್ತು ನಿಶಾ ಅವರನ್ನು ನಗದು ಬಹುಮಾನ, ಸ್ಮರಣೆಕೆ ನೀಡುವುದರ ಮೂಲಕ ಅಭಿನಂದಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ನವಾಜ್ ರವರು ಗಣರಾಜ್ಯೋತ್ಸವದ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ವಿನಿತರವರು ವಾಚಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸೀಮಾ ಮರಿಯ ಡಿಸೋಜ ಅವರು ಎಲ್ಲರಿಗೂ ಧನ್ಯವಾದಗಳು ಅರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಭಾಕರ್ ರವರು ಮಾಡಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕ ವೃಂದ ,ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಿಹಿ ತಿಂಡಿ ವಿತರಣೆಯೊಂದಿಗೆ
ಕಾರ್ಯಕ್ರಮ ಮುಕ್ತಾಯಗೊಂಡಿತು

ಇತ್ತೀಚಿನ ಸುದ್ದಿ

ಜಾಹೀರಾತು