12:29 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕಾಲ್ತೋಡು: ಕಾಲು ಸಂಕದಿಂದ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ಶಾಲಾ ಬಾಲಕಿಯ ಮೃತದೇಹ ಪತ್ತೆ

10/08/2022, 20:12

ಬೈಂದೂರು(reporterkarnataka.com): ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ

ವೇಳೆ ಕಾಲುಸಂಕದಿಂದ ನೀರಿಗೆ ಬಿದ್ದು  ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ(7) ಮೃತದೇಹ ಘಟನೆ ನಡೆದು 48 ತಾಸಿನ ಬಳಿಕ ಪತ್ತೆಯಾಗಿದೆ.

ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ 2ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಬುಧವಾರ ಸಂಜೆ ದುರ್ಘಟನೆ ನಡೆದ ಸ್ಥಳದಿಂದ 400 ಮೀಟರ್ ಅಂತರದಲ್ಲಿ  ಪತ್ತೆಯಾಗಿದೆ.

ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ ಬಾಲಕಿ ಕಾಲು ಸೇತುವೆಯಲ್ಲಿ ಆಯತಪ್ಪಿ ನೀರಿಗೆ ಬಿದ್ದಿದ್ದಳು. ಘಟನೆ ನಡೆದ ಬಳಿಕ ಬಾಲಕಿಯ ಪತ್ತೆಗಾಗಿ ನಿರಂತರ ಶೋಧ ಕಾರ್ಯ ನಡೆದಿತ್ತು. ಇದೀಗ ಬುಧವಾರ ಸಂಜೆ ಅಗ್ನಿಶಾಮಕ ದಳ ಸಿಬ್ಬಂದಿ, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಾಚರಣೆಗೆ ಎರಡು ದೋಣಿ ಗಳನ್ನು ಬಳಿಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು