5:25 PM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ: ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ; 11770 ಕೋಟಿ ಯೋಜನೆ

18/09/2024, 10:05

ಬೆಂಗಳೂರು(reporterkarnataka.com): ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ‌ ಸಚಿವಾಲಯ ರಚಿಸಲು ತೀರ್ಮಾನ ಮಾಡಿದ್ದು ಇದರಿಂದ ಈ ಭಾಗದ ಅಭಿವೃದ್ಧಿಯ ವೇಗ ಹೆಚ್ಚಲಿದೆ.
ಹೋರಾಟ, ತ್ಯಾಗ, ಬಲಿದಾನಗಳಿಂದ ಕಲ್ಯಾಣ ಕರ್ನಾಟಕ ವಿಮೋಚನೆಯಾದ ದಿನ ಇದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಕಲ್ಯಾಣ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಇಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದೇವೆ. 2013 ರಲ್ಲಿ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿದ ವರದಿಯನ್ನು ನಾವು ಯಥಾವತ್ತಾಗಿ ಒಪ್ಪಿಕೊಂಡೆವು‌. ಪರಿಣಾಮ 371J ಜಾರಿಯಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ಹಾಕಿಕೊಂಡು ಕೆಲಸಗಳು ಆರಂಭವಾದವು. ಇಂದಿನ‌ ಸಂಪುಟ ಸಭೆಯಲ್ಲಿ ಒಟ್ಟು 56 ವಿಷಯಗಳು ಚರ್ಚೆಯಾಗಿ ಒಪ್ಪಿಗೆ ಪಡೆಯಲಾಗಿದೆ. ಇದರಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಪಟ್ಟ ಸಂಗತಿಗಳನ್ನು ಒಪ್ಪಿಗೆ ಪಡೆಯಲಾಗಿದೆ ಎಂದರು.
ಒಟ್ಟು 56 ವಿಷಯಗಳಿಂದ 12692 ಕೋಟಿ ರೂಪಾಯಿ ವೆಚ್ಚವಾಗುತ್ತಿದ್ದು, ಇದರಲ್ಲಿ 46 ವಿಷಯಗಳ ಒಟ್ಟು ಮೊತ್ತ 11770 ಕೋಟಿ ಆಗಿದೆ. ಇವುಗಳಲ್ಲಿ ಬಹಳ ಮುಖ್ಯವಾಗಿ ಬೀದರ್-ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಗಳನ್ನಾಗಿ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ.
ಬೀದರ್- ಗುಲ್ಬರ್ಗದ ಎಲ್ಲಾ ಜನ ವಸತಿ ಪ್ರದೇಶಕ್ಕೆ 7200 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನ ಮಾಡಿದ್ದೇವೆ ಎಂದು ಅವರು ನುಡಿದರು.
7200 ಕೋಟಿಯಲ್ಲಿ ಶೇ.50 ರಷ್ಟು ಮೊತ್ತವನ್ನು ಕೊಡುವಂತೆ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸಲು ತೀರ್ಮಾನ ಮಾಡಿದ್ದೇವೆ.
371J ಜಾರಿಯಾದ ಬಳಿಕ ಇಲ್ಲಿಯವರೆಗೂ ಕೇಂದ್ರ ಸರ್ಕಾರ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಹೀಗಾಗಿ ಒಂದು ನಿರ್ಣಯ ಪಾಸ್ ಮಾಡಿದ್ದೇವೆ. ಕೇಂದ್ರ ಸರ್ಕಾರ ಕೂಡ ರಾಜ್ಯ ಸರ್ಕಾರದ ಕೊಟ್ಟಿರುವುಷ್ಟೆ ಪ್ರಮಾಣದ 5000 ಕೋಟಿ ಕೊಡಬೇಕು ಎನ್ನುವ ನಿರ್ಣಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ನುಡಿದರು.
17439 ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. 11770 ಕೋಟಿ ರೂಪಾಯಿಯಲ್ಲಿ , ಕೃಷಿ ಇಲಾಖೆಗೆ 100 ಕೋಟಿ, ಕೈಗಾರಿಕಾ ಇಲಾಖೆಗೆ 1550 ಕೋಟಿ , ಅರಣ್ಯ 32, ಆರೋಗ್ಯ 910 ಕೋಟಿ ಸೇರಿ ನಾನಾ ಇಲಾಖೆಗಳಿಗೆ ಹಣ ಹಂಚಿಕೆ ಮಾಡಲಾಗಿದೆ ಎಂದರು.
ಮಿನಿ ವಿಧಾನಸೌಧಗಳಿಗೆ ಪ್ರಜಾಸೌಧ ಎಂದು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ.
ನಂಜುಂಡಪ್ಪನವರ ಅಧ್ಯಕ್ಷತೆಯ ಸಮಿತಿ ವರದಿಯಲ್ಲಿನ ಹಿಂದುಳಿದ 119 ತಾಲ್ಲೂಕುಗಳಲ್ಲಿ ಇದುವರೆಗೂ ಏನೆಲ್ಲಾ ಪ್ರಗತಿ ಆಗಿದೆ ಎನ್ನುವುದನ್ನು ಅರಿಯಲು ಆರ್ಥಿಕ ತಜ್ಞ ಗೋವಿಂದ ರಾವ್ ಅಧ್ಯಕ್ಷತೆಯ ಸಮಿತಿ ಮಾಡಿದ್ದೇವೆ. 6 ತಿಂಗಳಲ್ಲಿ ಸಮಿತಿ ವರದಿ ನೀಡುತ್ತದೆ. ಕಲ್ಯಾಣ ಕರ್ನಾಟಕದಲ್ಲಿ ಹೊಸದಾಗಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ನಿರ್ಣಯ, 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾಡಲು ತೀರ್ಮಾನ ಮಾಡಿದ್ದೇವೆ. 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಇದರಲ್ಲಿ ಎರಡನ್ನು ಜಿಲ್ಲಾ ಆಸ್ಪತ್ರೆಗಳನ್ನಗಿ ಮೇಲ್ದರ್ಜೆಗೆ ಏರಿಸಲಾಗುವುದು. ಇದಕ್ಕೆ 892 ಕೋಟಿ ವೆಚ್ಚ ಮಾಡುತ್ತಿದ್ದೇವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು