11:25 PM Monday30 - December 2024
ಬ್ರೇಕಿಂಗ್ ನ್ಯೂಸ್
ಸಹಜ ಹೆರಿಗೆಗೆ ಆದ್ಯತೆ ನೀಡಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ: ನಕ್ಸಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ಬೈಕಿನ ಹಿಂದೆ ನಿಂತು ಜ್ವಾಲಿ ರೈಡ್ ಮಾಡಿದ ಮಲೆನಾಡಿನ ಶ್ವಾನ: ವೀಡಿಯೋ ವೈರಲ್ ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ ಕೆಪಿಎಸ್ ಸಿ ಮರುಪರೀಕ್ಷೆಯಲ್ಲೂ ಎಡವಟ್ಟು: ಕಾಂಗ್ರೆಸ್ ಸರಕಾರ ವಿರುದ್ದ ಪ್ರತಿಪಕ್ಷದ ನಾಯಕ ಆರ್.… ಕೋಲಾರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್ ರವಿ ಅಧಿಕಾರ ಸ್ವೀಕಾರ ಕೊಕ್ಕಡ ದೇಗುಲದ ಅಚ್ಚುಮೆಚ್ಚಿನ ಶ್ಯಾಮ ಇನ್ನು ನೆನಪು ಮಾತ್ರ: ಅಲ್ಪಕಾಲದ ಅನಾರೋಗ್ಯದಿಂದ ದೇವರಪಾದ… ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು: ಮೋಜು- ಮಸ್ತಿಗೆ ಜಿಲ್ಲಾಡಳಿತ… ನಂಜನಗೂಡು: ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಆಗ್ರಹಿಸಿ ರೈತ ಸಂಘ ಮತ್ತು… ಜನಪ್ರತಿನಿಧಿಗಳು ಸದನದ ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು: ಸ್ಪೀಕರ್ ಖಾದರ್

ಇತ್ತೀಚಿನ ಸುದ್ದಿ

ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ: 371 ಹಾಸಿಗೆಯ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಗೆ ಕ್ಷಣಗಣನೆ

21/12/2024, 17:46

ಬೆಂಗಳೂರು(reporterkarnataka.com): ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಲೋಕಾರ್ಪಣೆ ನಾಳೆ ಮುಖ್ಯಮಂತ್ರಿಗಳಿಂದ ನೆರವೇರಲಿದೆ.



ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು,ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ
ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾತಲ್ಯಾಬ್, ಮೂರು ಅಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ. ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ ಉಚಿತ ಮತ್ತು ಎ.ಪಿ.ಎಲ್. ರೋಗಿಗಳಿಗೆ ಶೇ.30ರ ರಿಯಾಯಿತಿ ದರದೊಂದಿಗೆ ಚಿಕಿತ್ಸೆ ಇಲ್ಲಿ ಸಿಗಲಿದೆ.
ಬೆಂಗಳೂರು, ಮೈಸೂರು ಬಿಟ್ಟರೆ ರಾಜ್ಯದಲ್ಲಿ ಮೂರನೇ ಸ್ವಂತ ಕಟ್ಟಡವನ್ನು ಕಲಬುರಗಿಯಲ್ಲಿ ಆಸ್ಪತ್ರೆ ಹೊಂದಲಿದ್ದು, ಬೆಂಗಳೂರು ಬಿಟ್ಟರೆ ಕಲಬುರಗಿ ಶಾಖಾ ಆಸ್ಪತ್ರೆಯಲ್ಲಿ ವಸ್ಕುಲರ್ ಸರ್ಜರಿ ಸೇವೆ ಸಹ ನೀಡಲು ಉದ್ದೇಶಿಸಲಾಗಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಮೊದಲನೇಯದು ಎನ್ನುವ ಹೆಗ್ಗಳಿಕೆ.‌
ನೂತನ ಆಸ್ಪತ್ರೆಯಲ್ಲಿ ನೀರಿನ ಕೊರತೆ ಎದುರಾಗದಂತೆ 7 ಲಕ್ಷ ಲೀ. ನೀರು ಸಾಮರ್ಥ್ಯ ಟ್ಯಾಂಕ್ ಸ್ಥಾಪಿಸಿದ್ದು, 11ಕೆ.ವಿ. ವಿದ್ಯುತ್ ಕೇಂದ್ರವನ್ನು 33 ಕೆ.ವಿ.ಗೆ ಮೇಲ್ದರ್ಜೇಗೇರಿಸಲಾಗಿದೆ.
*3 ತಿಂಗಳಲ್ಲಿ ಸೂಪರ್ ಸ್ಪೆಷಾಲಿಟ್ಟಿ ಆಸ್ಪತ್ರೆ ಲಭ್ಯ:*
ಜಯದೇವ ಆಸ್ಪತ್ರೆ ಉದ್ಘಾಟನೆ ನಂತರ ಮುಂದಿನ ಮೂರು ತಿಂಗಳಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಗಾಟಿಸಿ ಸಾರ್ವಜನಿಕರ ಸೇವೆಗೆ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುವರು.
ಹಳೇ ಜಿಲ್ಲಾ ಆಸ್ಪತ್ರೆ ಕಡೆವಿ ಅಲ್ಲಿ 100 ಹಾಸಿಗೆಯ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು. ಜಿಮ್ಸ್ ಆವರಣದಲ್ಲಿಯೇ 50 ಹಾಸಿಗೆಯ ಕ್ರಿಟಿಕಲ್ ಕೇರ್ ಯೂನಿಟ್, ಸುಟ್ಟು ಗಾಯಗಳ ಘಟಕ ಸ್ಥಾಪಿಸಲಾಗುತ್ತಿದೆ. ಇದಲ್ಲದೆ ಗುಲಬರ್ಗಾ ವಿ.ವಿ.ಯಲ್ಲಿ 10 ಎಕರೆ ಜಮೀನಿನಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ. *ಜಯದೇವ ಆಸ್ಪತ್ರೆಯಿಂದ 5.75 ಲಕ್ಷ ಓ.ಪಿ.ಡಿ. ಸೇವೆ:*
2016ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದ ಅವಧಿಯಲ್ಲಿಯೇ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ತಾತ್ಕಲಿಕ ಆರಂಭಿಸಲಾಗಿತ್ತು.
ಕಳೆದ 8 ವರ್ಷಗಳ ಅವಧಿಯಲ್ಲಿ ಈ ಆಸ್ಪತ್ರೆಯಿಂದ 5.75 ಲಕ್ಷ ಜನ ಮತ್ತು 18,550 ಮಕ್ಕಳು ಓ.ಪಿ.ಡಿ. ಸೇವೆ ಪಡೆದಿದ್ದಾರೆ. 47,500 ಜನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದು, 39,462 ಜನ ಕ್ಯಾತ್‌ಲ್ಯಾಬ್ ಸೇವೆಗೆ ಒಳಗಾಗಿದ್ದಾರೆ.
25,000 ಮಂದಿ ಎನ್ಜಿಯೋಗ್ರಾಮ್ ಮಾಡಿಸಿದ್ದು, 13,000 ಎನ್ಜಿಯೋಪ್ಲಾಸ್ಟಿಸ್, 300 ಜನ ಪೇಸ್ ಮೇಕರ್ ಹಾಕಿಕೊಂಡಿದ್ದು, 1,300 ಜನ ಓಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದಾರೆ. 3.92 ಲಕ್ಷ ಜನ ಇ.ಸಿ.ಜಿ, 2.14 ಲಕ್ಷ ಜನ ಎಕೊ ಟೆಸ್ಟ್ ಮಾಡಿಸಿದ್ದು, 53,399 ಜನ ಎಕ್ಸ್ರೇ ಮಾಡಿಸಿಕೊಂಡಿದ್ದಾರೆ. ಆಸ್ಪತ್ರೆ ಸ್ಥಾಪನೆಯಿಂದ ಇಲ್ಲಿನ ಜನರು ದೂರದ ಬೆಂಗಳೂರು, ಸೋಲಾಪೂರ ಹೋಗುವುದು ತಪ್ಪಿದೆ.
*ಶರಣರ ನಾಡಿನಲ್ಲಿ ಆರೋಗ್ಯ ಕ್ಷೇತ್ರ “ಪ್ರಕಾಶ”ಮಾನ:*
ಜಯದೇವ ಸಂಸ್ಥೆ ಎಂದರೆ “ಚಿಕಿತ್ಸೆ ಮೊದಲು, ಹಣ ನಂತರ(ಟ್ರೀಟ್‌ಮೆಂಟ್‌ ಫಸ್ಟ್‌-ಪೇಮೆಂಟ್‌ ನೆಕ್ಸ್ಟ್‌)
ತೊಗರಿ ಕಣಜ, ಶರಣರ ನಾಡು ಎಂದೇ ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆ ಈಗ “ಕಲ್ಯಾಣ”ಮಯವಾಗುತ್ತಿದೆ. ಅಂದರೆ ಎಲ್ಲ ಕ್ಷೇತ್ರಗಳ ಅದರಲ್ಲೂ ಆರೋಗ್ಯ ಕ್ಷೇತ್ರ ಪ್ರಕಾಶಮಾನವಾಗುತ್ತಿದೆ.
ಕಾಂಗ್ರೆಸ್‌ ಸರ್ಕಾರದ ಅಧಿಕಾರಾವಧಿಯಲ್ಲಿ ಹಲವಾರು ಯೋಜನೆಗಳು ಇಲ್ಲಿ ಅನುಷ್ಠಾನಕ್ಕೆ ಬಂದಿವೆ.
ಈ ಸಾಧನೆಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಕಾಳಜಿ ಮತ್ತು ಶ್ರಮ ಎದ್ದು ಕಾಣುತ್ತಿದೆ.
ಶರಣ ಪ್ರಕಾಶ್‌ ಪಾಟೀಲ್‌ ಅವರ ಇಚ್ಛಾಶಕ್ತಿ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಯ ಜನರಿಗೆ ಆರೋಗ್ಯ ಸಿರಿ ದೊರಕಿಸಿಕೊಡಲು ನಿರಂತರ ಶ್ರಮಿಸುತ್ತಿದ್ದಾರೆ. ಹಾಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಲಬುರಗಿ ಜಿಲ್ಲೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರವಲ್ಲದೇ ಇಡೀ ಕರುನಾಡಿನಲ್ಲಿ ಹಲವಾರು ವಿನೂತನ ಹಾಗೂ ಜನೋಪಯೋಗಿ ಯೋಜನೆಗಳು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ(2013–2018) ಜಯದೇವ ಸಂಸ್ಥೆಯ ಸ್ಥಾಪನೆಗೆ ಮುನ್ನುಡಿ ಬರೆಯಲಾಗಿತ್ತು. ಬೃಹತ್‌ ಆಸ್ಪತ್ರೆ ನಿರ್ಮಾಣ ಮಾಡಲು ಹಿಂದಿನ ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ ಯೋಜನೆ ನನೆಗುದಿಗೆ ಬಿದ್ದಿತ್ತು.
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೂಡಲೇ ಈ ಯೋಜನೆ ಕೈಗೆತ್ತಿಕೊಂಡರು. ನಿರಂತರ ಪರಿಶೀಲನೆ ಹಾಗೂ ಯೋಜನೆಯನ್ನು ಅನುಷ್ಠಾನ ಮಾಡಲೇಬೇಕೆಂಬ ಸಂಕಲ್ಪ ತೊಟ್ಟಿದ್ದರಿಂದ ಇಂದು ಜಯದೇವ ಹೃದ್ರೋಗ ಸಂಸ್ಥೆಯ ಭವ್ಯ ಕಟ್ಟಡ ತಲೆ ಎತ್ತಿ ನಿಂತಿದೆ.
*ಜಯದೇವ ಕಲಬುರಗಿ ನೂತನ ಶಾಖೆಯ ವಿಶೇಷತೆಗಳು:*

❖ 371 ಹಾಸಿಗೆ ಸಾಮರ್ಥ್ಯದ ಕಟ್ಟಡ
❖ 3 ಕ್ಯಾಥ್‌ಲ್ಯಾಬ್‌ಗಳು
❖ 3 ಆಪರೇಷನ್ ಥಿಯೇಟರ್‌ಗಳು
❖ 1 ಹೈಬ್ರಿಡ್ OT
❖ 105 ICCU ಹಾಸಿಗೆಗಳು
❖ 120 ಸಾಮಾನ್ಯ ವಾರ್ಡ್ ಬೆಡ್‌
❖ ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು
❖ ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ CT ಸ್ಕ್ಯಾನ್, 1.5T MRI, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ ಒದಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು