1:24 PM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಕಲ್ಯಾಣ ಕರ್ನಾಟಕದ 18 ಹೊಸ ತಾಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ: ವಿಧಾನಸಭೆಯಲ್ಲಿ ಅಜಯ್ ಸಿಂಗ್

18/12/2024, 20:37

ಬೆಳಗಾವಿ ಸುವರ್ಣ
ವಿಧಾನಸೌಧ(reporterkarnataka.com):
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಹೊಸದಾಗಿ ರಚಿಸಲಾಗಿರುವ ಎಲ್ಲ 18 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬುಧವಾರ ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ನಡೆದ ಚರ್ಚೆ ಸಂದರ್ಭದಲ್ಲಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ 18 ಹೊಸ ತಾಲ್ಲೂಕುಗಳಲ್ಲಿ ಕೆಕೆಆರ್‌ಡಿಬಿ ಅನುದಾನ ವಿನಿಯೋಗಿಸಿ ಹೊಸದಾಗಿ ಪ್ರಜಾಸೌಧ ನಿರ್ಮಾಣ ಮಾಡಲಾಗುತ್ತಿದ್ದು, ಬರುವ ತಿಂಗಳಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಪ್ರಸಕ್ತ ವರ್ಷ ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ 5000 ಕೋಟಿ ರೂ. ಅನುದಾನ ಒದಗಿಸಿದೆ ಎಂದರು.
ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರ್ಗಿ ಜಿಲ್ಲೆಯಲ್ಲಿ ಶಿಕ್ಷಣದಲ್ಲಿ ಹಿಂದುಳಿದಿದ್ದು, ಈ ಭಾಗಕ್ಕೆ ನೀಡಲಾಗಿರುವ ಅನುದಾನದಲ್ಲಿ ಶೇ. 25 ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಖರ್ಚು ಮಾಡಲು ನಿರ್ಧರಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಸರ್ಕಾರ ಕೈಗೊಂಡ ನಿರ್ಣಯದಂತೆ ಈ ವ್ಯಾಪ್ತಿಯ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ಪ್ರಾರಂಭಿಸಲಾಗಿದೆ, ಸುಮಾರು 40 ಸಾವಿರ ಮಕ್ಕಳು ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಗುಣಮಟ್ಟದ ಸುಧಾರಣೆಯ ಪರಿಣಾಮ ಮುಂದಿನ ಮರ‍್ನಾಲ್ಕು ವರ್ಷಗಳ ಬಳಿಕ ಕಾಣಬಹುದಾಗಿದೆ. ಕಲ್ಯಾಣ ಕರ್ನಾಟಕದಲ್ಲಿನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕೆಕೆಆರ್‌ಡಿಬಿ ವತಿಯಿಂದ 18.34 ಕೋಟಿ ರೂ. ವೆಚ್ಚದಲ್ಲಿ 2618 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ, ಅಲ್ಲದೆ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಹಿಂದುಳಿಯುವಿಕೆಯ ಕಾರಣ, ಪರಿಹಾರ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಎಕ್ಸ್ಪರ್ಟ್ ಎಜುಕೇಶನ್ ಕಮಿಟಿ ರಚಿಸಲಾಗಿದೆ. ಡಾ. ಡಿ.ಎಂ. ನಂಜುAಡಪ್ಪ ಅವರ ವರದಿಯಂತೆ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ 857 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಭಾಗದಲ್ಲಿನ ನಿರುದ್ಯೋಗ ಸಮಸ್ಯೆ ನೀಗಿಸಲು ಉದ್ಯೋಗ ಆವಿಷ್ಕಾರ ಕಾರ್ಯಕ್ರಮ ರೂಪಿಸಿದ್ದು, ಸುಮಾರು 25 ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಲಿಕೆ ಜೊತೆಗೆ ಕೌಶಲ್ಯ ತರಬೇತಿ ನೀಡಲು ಕೊಪ್ಪಳ ಮತ್ತು ಕಲಬುರ್ಗಿಯಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆಕೆಆರ್‌ಡಿಬಿ ವತಿಯಿಂದ 90 ಕೋಟಿ ರೂ. ವೆಚ್ಚದಲ್ಲಿ 224 ಹೊಸ ಬಸ್ ಖರೀದಿಸಲು ಕ್ರಮ ವಹಿಸಲಾಗಿದೆ. 156 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 34 ಹೊಸ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗಿದೆ, ಅಲ್ಲದೆ ಪ.ಜಾತಿ, ಪ.ಪಂಗಡದ ಹಾಸ್ಟೆಲ್‌ಗಳ ನಿರ್ಮಾಣಕ್ಕೆ 150 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ಇಂಜಿನಿಯರಿAಗ್ ವಿಭಾಗ, ಇಂಟರ್‌ನಲ್ ಆಡಿಟ್ ಡಿವಿಜನ್ ಆಗಬೇಕು. ಈ ಭಾಗದಲ್ಲಿ ಹೆಚ್ಚು ತೊಗರಿ ಬೆಳೆಯುವುದರಿಂದ ತೊಗರಿ ಬೆಳೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಮಲ್ಲಾಬಾದ್ ಏತನೀರಾವರಿ ಯೋಜನೆ ಆಗಬೇಕು. ಕೇಂದ್ರ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಆಗಬೇಕು ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು