3:02 PM Monday29 - December 2025
ಬ್ರೇಕಿಂಗ್ ನ್ಯೂಸ್
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ

ಇತ್ತೀಚಿನ ಸುದ್ದಿ

ಕಂಬಳ ಕ್ಷೇತ್ರದ ಉಸೇನ್ ಬೋಲ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು: ಯಾಕೆ? ಏನು ಕಾರಣ? ಮುಂದಕ್ಕೆ ಓದಿ

20/07/2022, 12:00

ಮಂಗಳೂರು(reporterkarnataka.com): ಕಂಬಳ ಕ್ಷೇತ್ರದ  ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕೇಸು ದಾಖಲಾಗಿದೆ. ಅದೂ ಕೂಡ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ಬುಕ್ ಆಗಿದೆ. ಹಾಗಾದರೆ, ಇದು ಏನು ಪ್ರಕರಣ ನೋಡೋಣ ಬನ್ನಿ..

ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ಧ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿಯ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ಧವೂ ಕ್ರಿಮಿನಲ್ ದೂರು ನೀಡಲಾಗಿದೆ.

ಅಧಿಕೃತ ಮಾನ್ಯತೆ ಪಡೆಯದ, ನಂಬಲಾರ್ಹವಲ್ಲದ ಸೈವೀವ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ ನೀಡಲಾಗಿದೆ ಎನ್ನಲಾಗುತ್ತಿದೆ. ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಹೇಳಲಾಗಿದೆ.

2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್ ನಲ್ಲಿ ಶ್ರೀನಿವಾಸ ಗೌಡ ಕ್ರಮಿಸಿದ್ದರು.

2009ರಲ್ಲಿ ಉಸೇನ್ ಬೋಲ್ಟ್ 100 ಮೀ. ಅನ್ನು 9.58 ಸೆಕೆಂಡ್‌ನಲ್ಲಿ ಕ್ರಮಿಸಿದ ದಾಖಲೆ ಉಡೀಸ್ ಮಾಡಿದ್ದರು. ರಾಜ್ಯ ಸರ್ಕಾರ ಸೇರಿ ದೇಶದ ಹಲವು ಸಂಸ್ಥೆಗಳು ಶ್ರೀನಿವಾಸ ಗೌಡಗೆ ನೆರವು ನೀಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು