11:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬ್ರಾವೊ ದಾಖಲೆ ಪ್ರದಾನ

15/01/2024, 15:39

ಹೊಸದಿಲ್ಲಿ(reporterkarnataka.com): ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸವರು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರವನ್ನು ಪ್ರದಾನ ಮಾಡಿದರು.
ಮೋಹನ್ ಕುಮಾರ್ ದಾನಪ್ಪರವರು 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24 ನೇ ಕಾರ್ಗಿಲ್‌ ವಿಜಯ ದಿವಸ ಅಂಗವಾಗಿ ಆಗಸ್ಟ್ 15, 2023 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಲ್ಲಿ “ಸಲಾಂ ಸೋಲ್ಮರ್ಸ್” ಶೀರ್ಷಿಕೆಯಡಿಯಲ್ಲಿ ” ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ” ಎನ್ನುವ ವಾಕ್ಯದಡಿಯಲ್ಲಿ ಯುವಕರು ದೇಶ ಸೇವೆಗೆ ಸೇರುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್‌ ಯುದ್ಧ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ನಿರಂತರ 5 ಗಂಟೆಗಳ ಕಾಲ 42 ಕಿಲೋ ಮೀಟರ್ ನಷ್ಟು ಉದ್ದದಷ್ಟು ಆಮ್ಲಜನಕ ಕಡಿಮೆಯಿರುವ ಮತ್ತು ಸಮುದ್ರ ಮಟ್ಟಕ್ಕಿಂತ 10.800 ಅಡಿ ಮೇಲಿರುವ ಪ್ರದೇಶದಲ್ಲಿ ಓಡುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದರು!
ಇವರ ಸಾಧನೆಯು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆಯಾಗಿ ಸೇರಲಾಗಿದೆ!

ಇತ್ತೀಚಿನ ಸುದ್ದಿ

ಜಾಹೀರಾತು