2:51 AM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಕನಸಿಲ್ಲದ ದಾರಿ ಕ್ರಮಿಸುವುದು ಕಷ್ಟ, ಆದರೆ ಕನಸನ್ನು ನನಸು ಮಾಡುವುದು ಪುಸ್ತಕಗಳು: ಉಪನ್ಯಾಸಕ ರವಿ ಇಡ್ಕಿದು

22/08/2023, 10:03

ಮಂಗಳೂರು(reporterkarnataka.com): ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ ದಾರಿಯಲ್ಲಿ ನಡೆಯುವುದು ಬಲು ಕಷ್ಟ. ಈ ಕನಸನ್ನು ನನಸು ಮಾಡುವುದು ಪುಸ್ತಕಗಳು ಎಂದ ಅವರು ಗ್ರಂಥಪಾಲಕರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಕನ್ನಡ-ತುಳು ಲೇಖಕ ಹಾಗೂ ಕೆನರಾ ಪಿಯು ಕಾಲೇಜಿನ ಉಪನ್ಯಾಸಕ ರಘು ಇಡ್ಕಿಡು ಹೇಳಿದರು.
ಅವರು ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಹಾಗೂ ದಕ್ಷಿಣ ಕನ್ನಡ- ಉಡುಪಿ-ಕೊಡಗು ಜಿಲ್ಲಾ ಗ್ರಂಥಾಲಯಗಳ ಸಂಘ ಜಂಟಿಯಾಗಿ ಆಯೋಜಿಸಿದ ರಾಷ್ಟೀಯ ಗ್ರಂಥಪಾಲಕರ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಮಾತನಾಡಿ, ಇಂತಹ ಕಾರ್ಯಾಗಾರಗಳನ್ನು ನಡೆಸುವ ಮೂಲಕ ನಮ್ಮಲಿರುವ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ವಿಭಾಗ ಮತ್ತು ಮಾಹಿತಿ ವಿಜ್ಞಾನದ ಅಧ್ಯಕ್ಷ ಡಾ. ಉಮೇಶ್ ನಾಯಕ್ ಅವರು ಗ್ರಂಥಾಲಯ ವೃತ್ತಿಪರರಿಗಾಗಿ ತೆರೆದ ಸಾಫ್ಟ್ ವೇರ್ ಪರಿಕರಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಸಂಘದ ಅಧ್ಯಕ್ಷ ಡಾ. ವಾಸಪ್ಪ ಗೌಡ ಅವರು ಪ್ರಾಸ್ತವಿಕ ಮಾತುಗಳೊಂದಿಗೆ ಡಾ. ಎಸ್.ಆರ್. ರಂಗನಾಥನ್ ಅವರು ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿ, ಸ್ವಾಗತಿಸಿದರು.

ಈ ಸಂದರ್ಭದಲ್ಲಿ 2022-23 ನೇ ಸಾಲಿನಲ್ಲಿ ಗ್ರಂಥಪಾಲಕರಾಗಿ ನಿವೃತ್ತಿ ಹೊಂದಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಗ್ರಂಥಪಾಲಕಿ ಸುನಿತಾ, ಕಾಸರಗೋಡು ಕೇಂದ್ರೀಯ ವಿದ್ಯಾಲಯದ ಗ್ರಂಥಪಾಲಕ ಶಂಕರ್ ನಾರಾಯಣ ಭಟ್, ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮಚಂದ್ರ ಅವರನ್ನು ಸನ್ಮಾನಿಸಿದಲಾಯಿತು. ಇದರೊಂದಿಗೆ ಜಾನಪದ ವಿಶ್ವವಿದ್ಯಾನಿಲಯ ಹಾವೇರಿಗೆ ಮುಖ್ಯ ಗ್ರಂಥಪಾಲಕರಾಗಿ ಆಯ್ಕೆಯಾದ ಡಾ. ರಾಜೇಶ್ ಕುಂಬಾರ್ ಹಾಗೂ 2021-22ನೇ ಸಾಲಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಬ್ಯಾಂಕ್ ಪಡೆದ ರೇಣುಕಾ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಸಂಘದ ನ್ಯೂಸ್ ಬುಲೆಟಿನನ್ನು ಬಿಡುಗಡೆಗೊಳಿಸಿಲಾಯಿತು. ಸಂಘದ ಕಾರ್ಯದರ್ಶಿ ರಾಮ ಕೆ., ಬುಲೆಟಿನ್ ಎಡಿಟರ್ ಹಾಗೂ ಸಂಘದ ಸಾರ್ವಜನಿಕ ಸಂಪರ್ಕ ಆಧಿಕಾರಿ ಡಾ. ವನಜ, ಕಾರ್ಯಕ್ರಮದ ಸಂಯೋಜಕಿ, ಕಾಲೇಜಿನ ಗ್ರಂಥಪಾಲಕಿ ಕುಮಾರಿ ಉಮಾ ಎ.ಬಿ., ಜತೆ ಕಾರ್ಯದರ್ಶಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.
ಡಾ. ರವಿಚಂದ್ರ ನಾಯ್ಕ ವಂದಿಸಿ, ಸಂಘದ ಉಪಾಧ್ಯಕ್ಷೆ ಡಾ. ರೇಖಾ ಡಿ ಪೈ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಗ್ರಂಥಪಾಲಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೋಶಾಧಿಕಾರಿ ಕವಿತಾ ಲೆಕ್ಕ ಪತ್ರ ಮಂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು