5:06 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಕಂದಕಕ್ಕೆ ಉರುಳಿದ ಮಿನಿ ಬಸ್ : ಒಂಬತ್ತು ಜನರ ದುರ್ಮರಣ

28/10/2021, 18:54

ದೋಡಾ (ಜಮ್ಮು-ಕಾಶ್ಮೀರ)
Reporterkarnataka.com

ಜಮ್ಮು ಕಾಶ್ಮೀರದ ಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಒಂದು ಆಳ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಥಾತ್ರಿ ಸಮೀಪ ನಡೆದಿದೆ.

ಜಮ್ಮು ಕಾಶ್ಮೀರದ ಥಾತ್ರಿಯಿಂದ ಮಿನಿ ಬಸ್​ ದೋಡಾಗೆ ಪ್ರಯಾಣಿಸುತ್ತಿತ್ತು. ಥಾತ್ರಿಯಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಬಸ್​ ಕಂದಕಕ್ಕೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದ ಜನರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು