4:54 PM Wednesday30 - October 2024
ಬ್ರೇಕಿಂಗ್ ನ್ಯೂಸ್
ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು… ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಇತ್ತೀಚಿನ ಸುದ್ದಿ

ಕನಕಪುರ ದಲಿತ ಯುವಕನ ಕೈ ಕತ್ತರಿಸಿದ ಪ್ರಕರಣ: ನಂಜನಗೂಡಿನಲ್ಲಿ ಪ್ರತಿಭಟನೆ; ತಪ್ಪಿತಸ್ಥರ ಗಡಿಪಾರು ಮಾಡಲು ಆಗ್ರಹ

30/07/2024, 16:57

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದಲ್ಲಿ ದಲಿತ ಯುವಕರ ಮೇಲೆ ಸವರ್ಣಿಯರು ಹಲ್ಲೆ ನಡೆಸಿ ಯುವಕನ ಕೈ ಕತ್ತರಿಸಿದ ಪ್ರಕರಣವನ್ನು ಖಂಡಿಸಿ ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ತಾಲೂಕು ಆಡಳಿತ ಭವನದ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಅವರನ್ನು ಈ ಕೂಡಲೇ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ದಲಿತ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷ ಕಾರ್ಯ ಬಸವಣ್ಣ ಹಾಗೂ ದಲಿತ ಮುಖಂಡ ಶಂಕರಪುರ ಸುರೇಶ್ ಮಾತನಾಡಿ ಸರ್ಕಾರದ ದಲಿತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು.
ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆಯುತ್ತಾ ಬಂದಿದ್ದರೂ ಕೂಡ ಜಾತಿ ವ್ಯವಸ್ಥೆ ಇನ್ನೂ ಜೀವಂತವಾಗಿದೆ.
ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕ್ಷೇತ್ರಕ್ಕೆ ಒಳಪಡುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಪರಿಶಿಷ್ಟ ಜಾತಿಯ ಅನಿಲ್ ಕುಮಾರ್, ಗೋವಿಂದರಾಜು, ಲಕ್ಷ್ಮಣ್ ಅವರ ಮೇಲೆ ಅದೇ ಗ್ರಾಮದ ಸವರ್ಣಿಯ ಜನಾಂಗದ ಹರ್ಷ, ಕರುಣೆೇಶ, ರಾಹುಲ್, ಶಿವ, ಶಶಾಂಕ್, ಸುಬ್ಬ, ದರ್ಶನ್ ಎಂಬುವವರು ದಲಿತ ಯುವಕ ಅನಿಲ್ ಕುಮಾರ್ ಎಂಬುವವನ ಕೈ ಕತ್ತರಿಸಿದ್ದಾರೆ. ಇನ್ನುಳಿದವರ ಮೇಲೂ ಹಲ್ಲೆ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಈ ಘಟನೆಯ ಪ್ರಮುಖ ವ್ಯಕ್ತಿಯು ರೌಡಿಯಾಗಿದ್ದು ಈತನ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ.
ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪದೇ ಪದೇ ದಾಳಿ ಮಾಡುತ್ತಿದ್ದರು ಪೋಲಿಸ್ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿರುವುದು ದಲಿತ ವಿರೋಧಿ ನೀತಿ ಆಡಳಿತಕ್ಕೆ ಇಳಿದ ಕೈಗನ್ನಡಿಯಾಗಿದೆ. ಈ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಎಚ್ಚೆತ್ತುಕೊಂಡು ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕು. ಹಲ್ಲೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳು ಒಕ್ಕೂಟದ ಅಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್, ಉಪಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಜಯಶಂಕರ್, ಸಹ ಕಾರ್ಯದರ್ಶಿ ಕುಮಾರ್, ಖಜಾಂಚಿ ಯಶವಂತ ಕುಮಾರ್, ಮಾಧ್ಯಮ ಕಾರ್ಯದರ್ಶಿ ಬದನವಾಳು ಪ್ರಶಾಂತ್, ಗೌರವ ಸಲಹೆಗಾರರಾದ ನಾರಾಯಣ್, ಸುರೇಶ್, ಅಭಿನಗಭೂಷಣ್, ಮರಿಸ್ವಾಮಿ, ಬಸವರಾಜು, ಅನಿಲ್, ಜಯರಾಮ್, ಮಹೇಶ್, ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು