10:09 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಜಯಾನಂದ ಪೆರಾಜೆ

17/08/2024, 18:27

ಬಂಟ್ವಾಳ(reporterkarnataka.com): ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು.

ಅವರು ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರ ಕಂಬ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಕಲ್ಲಡ್ಕ ಕ್ಲಸ್ಟರ್ ನ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವ್ಯಕ್ತಿತ್ವ ವಿಕಸನ ತರಬೇತಿ ನಡೆಸಿಕೊಟ್ಟು ಮಾತನಾಡಿದರು.
ಶಿಕ್ಷಕರು ಮೊದಲು ತನ್ನನ್ನು ತಾನು ಅರಿತು ಕೊಂಡಾಗ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡಲು ಸುಲಭ ಸಾಧ್ಯವಾಗುತ್ತದೆ. ತಾನು ಬದಲಾಗಿ ತನ್ನ ಜೊತೆಗೆ ಇತರರನ್ನು ಹೊಂದಿಕೊಂಡು ಬೆಳೆಯುವುದೇ ಶಿಕ್ಷಕ ಧರ್ಮ ಎಂದು ಅವರು ನುಡಿದರು.
ಶಿಕ್ಷಕರ ಸಮಸ್ಯೆಗಳ ಸಮಾಲೋಚನೆ ನಡೆಸಿ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಶ್ರಫ್ ಅತಿಥಿಯಾಗಿದ್ದರು.
ಮಜಿ ಶಾಲೆಯ ಮುಖ್ಯ ಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು. ಶಿಕ್ಷಕಿ ಸಂಗೀತ ಶರ್ಮ ಪಿ .ಜಿ . ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು