ಇತ್ತೀಚಿನ ಸುದ್ದಿ
ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ
13/12/2022, 23:07

ಪುತ್ತೂರು(reporter Karnataka.com): ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ನೆರವೇರಿಸಿದರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಧ್ಯಕ್ಷ ಸುರೇಂದ್ರ ಕಿಣಿ, ಕಾಲೇಜಿನ ಪ್ರಾಂಶುಪಾಲರಾದ ಅಕ್ಷತಾ,ಯಶಸ್ ವಿವೇಕಾನಂದ, ಐಎಎಸ್ ಅಧ್ಯಯನ ಕೇಂದ್ರದ ಅಧ್ಯಕ್ಷ ಕೃಷ್ಣನಾರಾಯಣ ಮುಳಿಯ, ಸಂಪನ್ಮೂಲ ವ್ಯಕ್ತಿ ದರ್ಶನ್ ಗರ್ತಿಕೆರೆ, ವಿವಿಎಸ್ ಸದಸ್ಯರಾದ ಮುರಳಿಧರ್, ಕಸಾಪ ಸದಸ್ಯರಾದ ಬಾಬು ಹಾಗೂ ಹಿರಿಯ ಸಾಹಿತಿ ಪತ್ರಕರ್ತರಾದ ಜಯಾನಂದ ಪೆರಾಜೆ ಅವರು ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಸಂಯೋಜಕರಾದ ಕಸಾಪ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರು, ಯಶಸ್ ವಿವೇಕಾನಂದ ಐಎಎಸ್ ಅಧ್ಯಯನ ಕೇಂದ್ರದ ಸಂಚಾಲಕ ಪುತ್ತೂರು ಉಮೇಶ್ ನಾಯಕ್ ಅವರು ಉಪಸ್ಥಿತರಿದ್ದರು.