1:40 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್ ಆರಂಭಿಸಲು ಅನುಮತಿ: ಎಐಸಿಟಿಇ ಕ್ರಮಕ್ಕೆ ಎಬಿವಿಪಿ ಸ್ವಾಗತ

31/05/2021, 19:45

ಮಂಗಳೂರು(reporterkarnataka news): ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಇಂಜಿನಿಯರಿಂಗ್ ಕೋರ್ಸ್ ಗಳನ್ನು 2020-22ನೇ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಅನುಮತಿ ನೀಡಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ.

  ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದು ಅನುಕೂಲಕರವಾಗಿದೆ. ಇಲ್ಲಿಯವರೆಗೆ ಕೇವಲ ನಗರ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ವ್ಯಾಸಂಗ ಮಾಡಲು ಇದು ಪ್ರೋತ್ಸಾಹಕರವಾಗಲಿದೆ. ಕನ್ನಡ ಭಾಷೆಯಲ್ಲಿ ವ್ಯಾಸಂಗ ಮಾಡುವ ವಿಷಯ ಕೇವಲ ಅನುಮತಿ ಹಂತದಲ್ಲಿ ನಿಲ್ಲದೆ ಇದನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರ ವಿಶೇಷವಾಗಿ ವಿಟಿಯು ಪಠ್ಯಪುಸ್ತಕಗಳ ಮತ್ತು ಇತರೆ ಪಠ್ಯಕ್ಕೆ ಸಹಾಯವಾಗುವ ಅನುವಾದಗಳನ್ನು ಶೀಘ್ರ ಗತಿಯಲ್ಲಿ ಮಾಡಬೇಕಿದೆ ಮತ್ತು ಸರಿಯಾದ ತಯಾರಿಯ ಜೊತೆಯಲ್ಲಿ ಪಠ್ಯಪುಸ್ತಕಗಳ (ಅನುವಾದಿತ) ಯಾವುದೇ ಕೊರತೆಯಾಗದಂತೆ ನಿಗಾವಹಿಸಬೇಕೆಂದು ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಜ್ಞರ ಸಮಿತಿ ರಚಿಸಿ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗಕ್ಕೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಸಲಹೆ ನೀಡುತ್ತದೆ ಎಂದು ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು