ಇತ್ತೀಚಿನ ಸುದ್ದಿ
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ
16/04/2024, 13:25
ಬೆಂಗಳೂರು(reporterkarnataka.com): ಕನ್ನಡ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81) ಅವರು ಮಂಗಳವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ವಿಧಿವಶರಾದರು.
ಕನ್ನಡ ಸಿನಿಮಾವನ್ನು ಮೊದಲ ಬಾರಿಗೆ ವಿದೇಶದಲ್ಲಿ ಚಿತ್ರೀಕರಿಸಿದ ಹೆಗ್ಗಳಿಕೆ ಅವರು ಪಾತ್ರರಾಗಿದ್ದರು. ಸಿಂಗಾಪುರದಲ್ಲಿ ರಾಜಾಕುಳ್ಳ ಸಿನಿಮಾ 1981ರಲ್ಲಿ ಬಿಡುಗಡೆ ಕಂಡಿತ್ತು.
ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು.
ದ್ವಾರಕೀಶ್ ಅವರ ನಿಧನಕ್ಕೆ ಚಿತ್ರರಂಗದ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.