10:35 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಾಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

27/01/2025, 21:38

ಬೆಂಗಳೂರು(reporterkarnataka.com): ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ‌ಭಾಷೆಯಾಗುತ್ತದೆ ಎಂದರು.
ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ನಾವು ನಮ್ಮ ಸಹೋದರ ಮತ್ತು ಇತರೆ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು.


ಇತರೆ ಭಾಷೆಯಲ್ಲಿ ತಪ್ಪು ತಪ್ಪಾಗಿ ಮಾತನಾಡುವುದಕ್ಕಿಂತ ನಮ್ಮದೇ ಭಾಷೆಯಲ್ಲಿ ಮಾತಾಡಬೇಕು. ಅಕ್ಕ ಪಕ್ಕದ ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಜನರಾಡುವ ಭಾಷೆಯೇ ಸಾರ್ವಭೌಮ. ನಮ್ಮಲ್ಲೂ ಇದನ್ನೇ ಆಚರಿಸಬೇಕು ಎಂದು ಕರೆ ನೀಡಿದರು.
ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚೆಚ್ಚು ಕಲಿಯಬೇಕು, ಕಲಿಸಬೇಕು ಎಂದು ಕರೆ ನೀಡಿದರು.
ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಾಸ್ ಪಡೆಯಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು