10:54 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕನ್ನಡ ಶಾಲೆ ಉಳಿಸುವ ಕಾರ್ಯಕ್ರಮ ಕಾಂಗ್ರೆಸ್ ಗೆ ಯಾಕೆ ಪಥ್ಯವಾಗುತ್ತಿಲ್ಲ: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

18/11/2022, 22:27

ಸುರತ್ಕಲ್(reporterkarnataka.com): ಕನ್ನಡ ಶಾಲೆಯನ್ನು ಪ್ರೋತ್ಸಾಹಿಸುವ ಜತೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ಶಾಲಾ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸುವ ಹಾಗೂ ಅವರಲ್ಲಿ ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಇದಾಗಿದ್ದು,ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಮಾಡುತ್ತಿದೆ.

ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವ ರಾಜಕೀಯ ಲಕ್ಷಣ ಕಂಡಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಪ್ರಶ್ನಿಸಿದ್ದಾರೆ.
ಕನ್ನಡ ಶಾಲೆಗಳು ಹೆಚ್ಚಾಗಿ ಸರಕಾರದ ಶಾಲೆಗಳಾಗಿದ್ದು ಇಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಸೇರಲು ಆಯಾ ವಿಭಾಗದ ಶಿಕ್ಷಣ ಅಧಿಕಾರಿಗಳ ಅನುಮತಿ ಬೇಕಾಗುವುದು ಸಾಮಾನ್ಯವಾಗಿದೆ.

ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿರುವುದಲ್ಲಿ ಯಾವುದೇ ಸರಕಾರಿ ಯಂತ್ರ ದುರುಪಯೋಗವಾಗಿಲ್ಲ. ಕಾಂಗ್ರೆಸ್ನ ಹಿರಿಯ ನಾಯಕನಾಗಿರುವ ರಮಾನಾಥ ರೈ ಅವರಿಗೆ ಇದರಲ್ಲಿ ರಾಜಕೀಯ ದೃಷ್ಟಿಕೋನದಿಂದ ದುರುಪಯೋಗ ಆಗಿರುವಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಮೂರ್ತಿ ಪೂಜೆಯನ್ನ ನಿಷೇಧ ಮಾಡಿರುವ ಮುಸ್ಲಿಂ ಸಮಾಜದ ಓಲೈಕೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಎಂಬ ಕಾರ್ಯಕ್ರಮ ಆರಂಭಿಸಿ ಮುಸ್ಲಿಮ್ ಸಮಾಜದಲ್ಲಿ ವಿರೋಧ ಎದುರಿಸುವಂತಾಗಿದೆ. ಹಿರಿಯ ರಾಜಕಾರಣಿ ಇಬ್ರಾಹಿಂ ಅವರು ಟಿಪ್ಪುವಿನ ಮೂರ್ತಿಯನ್ನು ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದು ಸರಿಯಾಗಿದೆ.

ಕರಾವಳಿ ಭಾಗ ಮಡಿಕೇರಿ ಹಾಗೂ ರಾಜ್ಯದಾದ್ಯಂತ ನೂರಾರು ದೇವಸ್ಥಾನಗಳ ನಾಶಕ್ಕೆ ಕಾರಣವಾದ ಹಾಗೂ ಅಮಾಯಕ ಹಿಂದುಗಳ ಸಾಮೂಹಿಕ ಕಗ್ಗೊಲೆ ನಡೆಸಿರುವ ಟಿಪ್ಪು ಜಯಂತಿ ಕಾರ್ಯಕ್ರಮ ಭಾರತಕ್ಕೆ ಅದರಲ್ಲೂ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು