6:39 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Kannada | ಬಾನು ಮುಷ್ತಾಕ್ ಗೆ ಬುಕರ್ ಪ್ರಶಸ್ತಿ ಭರವಸೆಯ ಪ್ರತೀಕ: ಡಾ ಪುರುಷೋತ್ತಮ ಬಿಳಿಮಲೆ

02/06/2025, 20:31

ಬೆಂಗಳೂರು(reporterkarnataka.com): ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ ಕಂಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಬಾನು ಮುಷ್ತಾಕ್ ತಮ್ಮನ್ನು ಜಾತ್ರೆಯಲ್ಲಿ ನಿಂತ ಏಕಾಂಗಿ ಎಂದು ಕರೆದುಕೊಳ್ಳುತ್ತಾರೆ. ಮುಸಲ್ಮಾನ ಮಹಿಳೆಯಲ್ಲಿ ಹುಟ್ಟಿದ ಈ ರೀತಿಯ ಏಕಾಂಗಿತನವೇ ಅವರನ್ನು ಜಗತ್ತಿನ ಮುಖ್ಯ ಲೇಖಕಿಯಾಗಿ ರೂಪಿಸಿದ್ದು, ಇದರ ಪ್ರಾಮುಖ್ಯತೆಯನ್ನು ನಾಗರಿಕ ಸಮಾಜವು ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.
ಹಾರ್ಟ್ ಲ್ಯಾಂಪ್ ಕೃತಿಯನ್ನು ಕೇವಲ ಶೈಕ್ಷಣಿಕ ಚೌಕಟ್ಟಿನಲ್ಲಿ ನೋಡಬೇಕಿಲ್ಲ. ಅದರಾಚೆಗೂ ಈ ಕೃತಿಯ ಮಹತ್ವ ವಿಸ್ತರಿಸಿದ್ದು, ಕೃತಿಯ ಮಾನವೀಯ ಮತ್ತು ಸಾಮಾಜಿಕ ನಿಲುವುಗಳು ಸಾರ್ವಕಾಲಿಕ ಮತ್ತು ಸಾರ್ವತ್ರಿಕವಾಗಿವೆ ಎಂದಿರುವ ಬಿಳಿಮಲೆ, 2010ರ ಜ್ಞಾನಪೀಠದ ಬಳಿಕ ಕನ್ನಡಕ್ಕೆ ಸಂದ ಅತ್ಯುನ್ನತ ಗೌರವ ಇದಾಗಿದೆ. ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಜೋಡಿ ಇದನ್ನು ಸಾಧ್ಯವಾಗಿಸಿರುವುದು ಕನ್ನಡಿಗರೆಲ್ಲರ ಹೆಮ್ಮೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.
ಅನಂತಮೂರ್ತಿ ಅವರ ಸಂಸ್ಕಾರ ಕೃತಿಯನ್ನು ಎ.ಕೆ.ರಾಮಾನುಜನ್ ಅನುವಾದಿಸಿದ್ದರು. ಆ ಕೃತಿಗೆ ಬೂಕರ್ ಪ್ರಶಸ್ತಿ ಸ್ವಲ್ಪದರಲ್ಲಿ ಕೈ ತಪ್ಪಿತ್ತು ಎಂಬ ಅಂಶವನ್ನು ಸ್ಮರಿಸಿರುವ ಬಿಳಿಮಲೆ, ದೀಪಾ ಭಾಸ್ತಿ ಕನ್ನಡಕ್ಕೆ ಈ ಕೊರತೆಯನ್ನು ಕರ್ನಾಟಕದ ಬಹುಭಾಷಾ ನೆಲೆಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಉತ್ಕೃಷ್ಟವಾಗಿ ತಮ್ಮ ಅನುವಾದ ಕಾರ್ಯವನ್ನು ನಿರ್ವಹಿಸುವ ಮೂಲಕ ನೀಗಿಸಿದ್ದಾರೆ ಎಂದು ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರಾದ ಡಾ. ವಿ ಪಿ ನಿರಂಜನಾರಾಧ್ಯ, ಡಾ ರವಿಕುಮಾರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ ಸಂತೋಷ ಹಾನಗಲ್ಲ, ಆಪ್ತ ಕಾರ್ಯದರ್ಶಿ ಟಿ ಎಸ್ ಫಣಿಕುಮಾರ್ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು