9:47 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕನ್ನಡವನ್ನು ಹುಡುಕುವ ಪರಿಸ್ಥಿತಿ ಬರಬಾರದು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ

07/04/2022, 18:56

ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಎಚ್ಚರಿಸಿದರು.

ಅವರು ಗುರುವಾರ ನಗರದ ಜ್ಯೋತಿಯಲ್ಲಿರುವ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾದ ಸಭೆಯಲ್ಲಿ ಮಾತನಾಡಿದರು.

ಬ್ಯಾಂಕುಗಳಲ್ಲಿ ಕನ್ನಡ ಭಾಷೆಗೆ  ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅರ್ಜಿ, ಚಲನ್, ನಾಮ ಫಲಕಗಳು, ಜಾಹಿರಾತುಗಳು,  ನಮೂನೆ, ಚೆಕ್, ರಸೀದಿ ಸೇರಿದಂತೆ ಇತ್ಯಾದಿಗಳು ಕನ್ನಡದಲ್ಲೇ ಮುದ್ರಿತಗೊಂಡು ಗ್ರಾಹಕರ ಕೈಸೇರಬೇಕು. ಹಿಂದಿ-ಇಂಗ್ಲೀಷ್  ಭಾಷೆಗೆ ನೀಡುವ ಸ್ಥಾನ ಮಾನ ಕನ್ನಡ ಭಾಷೆಗೂ ದೊರಕಬೇಕು ಎಂದರು.

ಹೊರ ರಾಜ್ಯಗಳಿಂದ ಬರುವ ಉದ್ಯೋಗಿಗಳು ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು ಹಾಗೂ ಅದಕ್ಕೆ ಅನುಕೂಲವಾಗುವಂತಹ ತರಬೇತಿಗಳನ್ನು ಆಯೋಜಿಸಬೇಕು, ಒಂದು ವೇಳೆ ಕನ್ನಡವನ್ನು ಕಲಿಯದೇ , ಕನ್ನಡವನ್ನು ಬಳಸದೇ ಹೋದಲ್ಲಿ ಅಂತಹ ಉದ್ಯೋಗಿಗಳ ವಿರುದ್ದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ರೈತರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಅರ್ಥವಾಗಲು ಬ್ಯಾಂಕಿನ ಅಧಿಕೃತ ವೆಬ್‍ಸೈಟ್ ಹಾಗೂ ಮೊಬೈಲ್ ಬ್ಯಾಂಕಿಂಗ್ ನಲ್ಲಿ  ಕನ್ನಡ ಭಾಷೆಯನ್ನು ಅನುಷ್ಡಾನಕ್ಕೆ ತರಬೇಕು, ಬ್ಯಾಂಕುಗಳಲ್ಲಿರುವ ಕನ್ನಡ ಘಟಕಗಳಲ್ಲಿ ಕನ್ನಡ ಭಾಷೆಗೆ ಸಂಬಂಧಿಸಿದ ಎಲ್ಲಾ ಆಚರಣೆಗಳನ್ನು ನಡೆಸಬೇಕು ಹಾಗೂ ಬ್ಯಾಂಕುಗಳ ಮಾಸಪತ್ರಿಕೆಗಳಲ್ಲಿಯೂ ಕನ್ನಡ ಭಾಷೆಯ ಲೇಖನಗಳಿರಬೇಕು,  ಕರ್ನಾಟಕದಲ್ಲಿ ವ್ಯಹರಿಸುವ ಭಾಷೆಗಳೇ ಕನ್ನಡವನ್ನು ಬಳಸದೆ ಇತರೆ ಭಾಷೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ಮುಂದೆ ಕನ್ನಡವನ್ನು ಹುಡುಕುವ ಪರಿಸ್ಥಿತಿ ಎದುರಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದರು. 

ಈ ಸಂಧರ್ಭದಲ್ಲಿ ಬ್ಯಾಂಕ್ ನ ವಲಯ ಮಹಾ ಪ್ರಬಂಧಕರಾದ ಗಾಯತ್ರಿ,  ಉಪ ಮಹಾ ಪ್ರಬಂಧಕ ಗೋಪಾಲಕೃಷ್ಣ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಮೇಶ್ ಗುಬ್ಬಿಗೂಡು , ಕಾರ್ಯದರ್ಶಿ ಡಾ.ಸಂತೋಷ್ , ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಇತರೆ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು