10:25 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು