1:36 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ರಾಜೇಶ್ ಭಟ್ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕಾರ

05/12/2021, 15:46

ಬೆಂಗಳೂರು(reporterkarnataka.com): ಇಂಟರ್ನ್‌ಶಿಪ್ ಗೆ ಆಗಮಿಸಿದ ಕಾನೂನು ವಿದ್ಯಾರ್ಥಿನಿಗೆ ತನ್ನ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪೊಲೀಸರಿಗೆ ಶರಣಾಗುವುದು ಅನಿವಾರ್ಯವಾಗಿದೆ.

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ. ಬ್ಯಾಂಕ್‌ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ.

ಆರೋಪಿಗೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಯ ಮನೆ ಹಾಗೂ ಕಚೇರಿ ತಪಾಸಣೆ ನಡೆಸಲಾಗಿದೆ.

ಪ್ರಕರಣ ಗಂಭೀರ ಸ್ವರೂಪದ್ದು ಆಗಿರುವುದರಿಂದ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಜೇಶ್ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆ ಬಳಿಕ ಆರೋಪಿ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ನಿರೀಕ್ಷಣಾ ಜಾಮೀನು ಅರ್ಜಿ ಶನಿವಾರ ವಜಾಗೊಂಡಿದೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು