1:34 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ:  ವಕೀಲ ರಾಜೇಶ್ ಭಟ್ ಗೆ 4 ದಿನಗಳ ಪೊಲೀಸ್ ಕಸ್ಟಡಿ

21/12/2021, 20:13

ಬೆಂಗಳೂರು(reporterkarnataka.com): ಇಂಟರ್ನ್‌ಶಿಪ್ ಗೆ ಆಗಮಿಸಿದ ಕಾನೂನು ವಿದ್ಯಾರ್ಥಿನಿಗೆ ತನ್ನ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 2 ತಿಂಗಳಿನಿಂದ ತಲೆಮರೆಸಿಕೊಂಡು ನಿನ್ನೆ ನ್ಯಾಯಾಲಯಕ್ಕೆ ಶರಣಾದ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ಅವರಿಗೆ 4 ದಿನಗಳ ಪೊಲೀಸ್ ಕಸ್ಟಡಿ ನೀಡಲಾಗಿದೆ.

ವಕೀಲ ರಾಜೇಶ್ ಭಟ್ ಅವರು ನಿನ್ನೆ ಮಧ್ಯಾಹ್ನ 3ನೇ ಜೆಎಂ ಎಫ್ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಪೊಲೀಸರು ಅವರನ್ನು 7 ದಿನಗಳ ಕಾಲ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. ಆದರೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.

ರಾಜೇಶ್ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಶರಣಾಗತಿ ಅನಿವಾರ್ಯವಾಗಿತ್ತು. ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿತ್ತು. ಬ್ಯಾಂಕ್‌ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿತ್ತು ಆರೋಪಿಗೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿತ್ತು. ಅವರ ಪತ್ನಿಯನ್ನೂ ಬಂಧಿಸಿ ಬಿಡುಗಡೆ ಮಾಡಲಾಗಿತ್ತು.

ಪ್ರಕರಣ ಗಂಭೀರ ಸ್ವರೂಪದ್ದು ಆಗಿರುವುದರಿಂದ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಜೇಶ್ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆ ಬಳಿಕ ಆರೋಪಿ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್‌ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು