12:46 PM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ ಸಚಿವ ಖಂಡ್ರೆ ಎಚ್ಚರಿಕೆ

21/01/2025, 09:37

ಬೆಂಗಳೂರು(reporterkarnataka.com): ಹಾಸನದ ಸಕಲೇಶಪುರ ಬಳಿಯ ಯಸಳೂರು ವಲಯದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಂತಾರ: ಚಾಪ್ಟರ್ 1 ಸಿನಿಮಾ ಚಿತ್ರೀಕರಣ ವೇಳೆ
ಷರತ್ತು ಉಲ್ಲಂಘನೆ ಮಾಡಿದ್ದಲ್ಲಿ ಚಿತ್ರೀಕರಣವನ್ನು
ನಿರ್ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ಶನಿವಾರಸಂತೆ ಬಳಿಯ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಸಿನಿಮಾದ ಶೂಟಿಂಗ್ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಈಶ್ವರ ಬಿ. ಖಂಡ್ರೆ ಅವರು, ‘ಕಾಂತಾರ: ಚಾಪ್ಟರ್​ 1’ ಚಿತ್ರತಂಡದವರು ಒಂದು ವೇಳೆ ಷರತ್ತು ಉಲ್ಲಂಘನೆ ಮಾಡಿದ್ದರೆ ಚಿತ್ರೀಕರಣವನ್ನು ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯವರು ಅನುಮತಿ ಕೋರಿದ್ದರು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಆದರೆ ಕಾಂತಾರ ಚಿತ್ರತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು