7:43 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಕಾಂತಾರ ದೈವ ಅನುಕರಣೆ ವಿವಾದ: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ಕ್ಷಮೆ ಕೇಳಿದ ನಟ ರಣವೀರ್ ಸಿಂಗ್

26/05/2026, 19:36

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿಗೆ ಆಗಮಿಸಿದ್ದು, ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ಕ್ಷಮೆ ಕೋರಿದ್ದಾರೆ. ಕೆಲ ದಿನಗಳ ಹಿಂದೆ ಕಾಂತಾರಾ ಸಿನಿಮಾದ ದೈವದ ಬಗ್ಗೆ ಅನುಕರಣೆ ಮಾಡುವ ನೆಪದಲ್ಲಿ ದೈವಕ್ಕೆ ಅಪಮಾನ ಮಾಡಿದ್ದರು ರಣವೀರ್ ಸಿಂಗ್. ರಣವೀರ್ ಸಿಂಗ್ ವರ್ತನೆಗೆ ತೀವ್ರ ಖಂಡನೆ ವ್ಯಕ್ತವಾಗಿತ್ತಲ್ಲದೇ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ರಣವೀರ್ ಸಿಂಗ್​​ ಅವರಿಗೆ ಮಾಡಿದ ತಪ್ಪಿಗೆ ಕ್ಷಮೆ ಕೇಳುವಂತೆ ಹೈಕೋರ್ಟ್ ಸೂಚಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಬಂದು ಕ್ಷಮೆ ಕೇಳುವುದಾಗಿ ರಣವೀರ್ ಸಿಂಗ್ ಹೇಳಿಕೆ ನೀಡಿದ್ದರು. ಇದೀಗ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿಯ ಬಳಿ ಕ್ಷಮೆ ಕೇಳಿದ್ದಾರೆ.


ಗೋವಾನಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷ ಅತಿಥಿಯಾಗಿ ರಣವೀರ್ ಸಿಂಗ್ ಭಾಗವಹಿಸಿದ್ದರು. ಅದೇ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ ಸಹ ವೇದಿಕೆಯ ಮುಂದೆ ಇದ್ದರು. ಈ ವೇಳೆ ರಿಷಬ್ ಶೆಟ್ಟಿ ಅವರನ್ನು ಮಾತನಾಡಿಸುವ ಸಂದರ್ಭದಲ್ಲಿ ಕಾಂತಾರಾ ಸಿನಿಮಾದ ದೈವದ ಬಗ್ಗೆ ಮಾತನಾಡುತ್ತಾ ದೈವವನ್ನು ಹೀಯಾಳಿಸಿ ಅನುಕರಣೆ ಮಾಡಿದ್ದರು. ರಣವೀರ್ ಸಿಂಗ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಮರು ದಿನವೇ ರಣವೀರ್ ಸಿಂಗ್ ಕ್ಷಮೆ ಕೇಳಿದರಾದರೂ, ಈ ಬಗ್ಗೆ ಹೈಕೋರ್ಟ್​​ನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ರಣವೀರ್ ಮಾಡಿರುವುದು ತಪ್ಪೆಂದು ತೀರ್ಮಾನಿಸಿ, ಚಾಮುಂಡಿ ದೇವಾಲಯದಲ್ಲಿ ಕ್ಷಮೆ ಕೇಳಬೇಕು ಎಂದು ಕೆಲ ವಾರಗಳ ಹಿಂದೆ ಸೂಚನೆ ನೀಡಿತ್ತು. ಆದರೆ ರಣವೀರ್ ಸಿಂಗ್ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.
ಆದರೆ ಇದೀಗ ಬಾಲಿವುಡ್ ನಿಂದ ಬ್ಯಾನ್ ಸೇರಿದಂತೆ ಜೀವನದಲ್ಲಿ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಿದ್ದಂತೆ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿರುವ ರಣವೀರ್ ಸಿಂಗ್ ಚಾಮುಂಡಿ ದೇವಾಲಯದ ಗರ್ಭಗುಡಿಯಲ್ಲಿ ಕುಳಿತು ತಾಯಿಯ ಮುಂದೆ ಕ್ಷಮೆ ಯಾಚನೆ ಮಾಡಿದ್ದಾರೆ. ಅಲ್ಲದೆ, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3′ ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಬ್ಯಾನ್ ಆದೇಶದಿಂದಾಗಿ ರಣವೀರ್ ಸಿಂಗ್ ಅವರು ಭಾರತದಲ್ಲಿ ಹೊಸ ಸಿನಿಮಾಗಳ ಶೂಟಿಂಗ್ ಮಾಡಲು ಅಥವಾ ಹೊಸ ಚಿತ್ರಗಳನ್ನು ನಿರ್ಮಿಸಲು ಸಾಧ್ಯವಾಗುವುದಿಲ್ಲ. ವಿವಾದ ಬಗೆಹರಿಯುವವರೆಗೂ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಗಿದೆ. ಧುರಂಧರ್ 2’ ಚಿತ್ರದ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಅವರಿಗೆ ಬಾಲಿವುಡ್‌ನಲ್ಲಿ ಭಾರಿ ಬೇಡಿಕೆ ಇತ್ತು. ಆದರೆ ಇದೇ ಸಂದರ್ಭದಲ್ಲಿ ಅವರ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ರಣವೀರ್ ಸಿಂಗ್ ಈ ಹಿಂದೆ ತಾವು ಚಾಮುಂಡಿ ದೇವಿಗೆ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿಯ ಕ್ಷಮೆ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು