ಇತ್ತೀಚಿನ ಸುದ್ದಿ
ಕೂಡ್ಲಗಿ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
22/10/2021, 09:17
ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com
ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು.
ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ನಾಗೇಶರವರು ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು, ಪೆನಾಲ್ ವಕೀಲರಾದ ಸಿ.ವಿರುಪಾಕ್ಷಪ್ಪ “ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ” ಕುರಿತು ಉಪನ್ಯಾಸ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಮಾತನಾಡಿದರು. ಸರ್ಕಾರಿ ಅಭಿಯೋಜಕ ಹೊಸಬಡ್ರು ಅಣ್ಣೇಶ, ಸರ್ಕಾರಿ ಸಹಾಯಕ ಅಭಿಯೋಜಕರಾದ ಹೋ.ಮ.ಪಂಡಿತರಾಧ್ಯ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಪ್ರಭಾರ ಮುಖ್ಯ ಶಿಕ್ಷಕ ಕೊಟ್ರೇಶ ವೇದಿಕೆಯಲ್ಲಿದ್ದರು. ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಮಾತನಾಡಿದರು. ನ್ಯಾಯಾಂಗ ಇಲಾಖೆಯ ಸುರೇಶ್ ವೈ ಏಣಗಿ ಪ್ರಾರ್ಥಿಸಿದರು, ಟಿ.ಪರಸಪ್ಪ ಸ್ವಾಗತಿಸಿದರು. ಜಿ.ಎಂ.ಮಲ್ಲಿಕಾರ್ಜುನ ಸ್ವಾಮಿ ನಿರೂಪಿಸಿದರು. ವಕೀಲರಾದ ಟಿ.ಮಲ್ಲಿಕಾರ್ಜುನ ವಂದಿಸಿದರು.
ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿಯವರು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.