ಇತ್ತೀಚಿನ ಸುದ್ದಿ
ಕಾನೂನುಬಾಹಿರ ಮರುಳುಗಾರಿಕೆ, ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ: ಉಡುಪಿ ಜಿಲ್ಲೆ ಸಮಸ್ಯೆ ಕುರಿತ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ
05/10/2023, 22:09

ಬೆಂಗಳೂರು(reporterkarnataka.com): ಕಾನೂನುಬಾಹಿರ ಮರುಳುಗಾರಿಕೆ ಹಾಗೂ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಗಣಿಗಾರಿಕೆಯಿಂದ ಜನರಿಗೆ ತೊಂದರೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ಮೂರನೇ ಮಹಡಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ , ವಿಧಾನ ಪರಿಷತ್ ಸದಸ್ಯ ರಾದ ಮಂಜುನಾಥ ಭಂಡಾರಿ
ಸಂಸದ ರಾಘವೇಂದ್ರ, ಹಾಗೂ ಉಡುಪಿ ಜಿಲ್ಲೆಯ ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.