ಇತ್ತೀಚಿನ ಸುದ್ದಿ
ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ?: ಶಾಸಕ ಪೂಂಜ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
25/05/2024, 14:30
ಮಂಗಳೂರು(reporterkarnataka.com): ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ?. ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್ ಎ ಅಂತ ಪೊಲೀಸರ ಮೇಲೆ ಗಲಾಟೆ ಮಾಡೋಕೆ ಆಗುತ್ತಾ?
ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮ ಜತೆ ಅವರು ಮಾತನಾಡಿದರು.
ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಐಪಿಸಿ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ನಾನ್ ಬೇಲೇಬಲ್ ಅಫೆನ್ಸ್. ಈ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ. ಇದರಲ್ಲಿ 7 ವರ್ಷ ಜೈಲು ಶಿಕ್ಷೆಯಾಗುತ್ತದೆ. ಎಂಎಲ್ ಎ ಅಂತ ಅವರನ್ನು ಬಿಟ್ಟು ಬಿಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಹರೀಶ್ ಪೂಂಜ ವಿರುದ್ಧ ಎರಡು ಪ್ರಕರಣಗಳಿವೆ. ಅವರು ಯಾರ ಪರವಾಗಿ ಗಲಾಟೆ ಮಾಡಿದ್ದಾರೆ ಗೊತ್ತಾ ಎಂದು ಸಿಎಂ ಮರುಪ್ರಶ್ನೆ ಹಾಕಿದರು.