1:50 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕಾರ್ಕಳ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ ಸಿಎಂ ಆದೇಶ

09/02/2024, 19:40

ಉಡುಪಿ(reporterkarnataka.com): ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ ಹೆಬ್ಬಾಳ್ಕರ್ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.
ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು