5:59 PM Friday20 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ…

ಇತ್ತೀಚಿನ ಸುದ್ದಿ

ಕರಕುಶಲ ಕರ್ಮಿಗಳಿಗೆ ಪ್ರೊತ್ಸಾಹ: 10 ದಿನಗಳ ಬೆಂಗಳೂರು ಉತ್ಸವಕ್ಕೆ ಚಾಲನೆ; ಬನ್ನಿ, ನೋಡಲು ನೀವೂ ಬನ್ನಿ!

07/08/2021, 08:57

ಬೆಂಗಳೂರು(reporterkarnataka.com); ಕೊರೊನಾ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು. 


ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಿದ ನಟಿ ಶುಭಾ ಶೆಟ್ಟಿ ಮಾತನಾಡಿ, ಕೊರೊನಾ ಕಾಲದಲ್ಲಿ ಎಲ್ಲರಿಗೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ ಮಾರುಕಟ್ಟೆಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವದಲ್ಲಿ ಪಾಲ್ಗೊಂಡು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿದರು. 


ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್‌ 15 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕರೋನಾ ಸಾಂಕ್ರಾಮಿಕ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 


ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್‌. ಶಂಕರ್‌, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್‌. ಅಪ್ಪಾಜಯ್ಯ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು