1:29 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ಮಂಡಳಿಯಾಗಿಸಲು ಸರಕಾರ ಚಿಂತನೆ: ಸಚಿವ ಡಿ. ಸುಧಾಕರ್

01/07/2023, 23:37

ಮಂಗಳೂರು(reporterkarnataka.com): ಮುಂಬರುವ ದಿನಗಳಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಹೇಳಿದರು.
ಅವರು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿಯನ್ನಾಗಿ ಪರಿವರ್ತಿಸುವ ಸಂಬಂಧ ಈಗಾಗಲೇ ಚರ್ಚೆ ನಡೆಸಲಾಗಿದೆ, ಅದನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪುನರ್ ನಾಮಕರಣ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ರಾಜ್ಯದ ಕರಾವಳಿ ಪ್ರದೇಶಗಳ ಅಭಿವೃದ್ದಿಗೆ ಸರ್ಕಾರ ಕಟಿಬದ್ಧವಾಗಿದೆ, ನಿರ್ಲಕ್ಷ್ಯಕ್ಕೊಳಪಟ್ಟ ಪ್ರದೇಶಗಳನ್ನು ಗುರುತಿಸಿ, ಅಭಿವೃದ್ಧಿ ಪಡಿಸಲು ಹೆಚ್ಚಿನ ಒತ್ತು ನೀಡಲಾಗುವುದು, ಈ ವಿಚಾರದಲ್ಲಿ ಮೂರು ಜಿಲ್ಲೆಗಳ ಶಾಸಕರು ಹಾಗೂ ವಿಧಾನ ಪರಿಷತ್ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಅವರು ತಿಳಿಸುವ ಪ್ರದೇಶಗಳಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಿಡುಗಡೆ ಮಾಡುವ ಅನುದಾನವನ್ನು ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಬಳಸಿಕೊಳ್ಳಬೇಕು, ಅದನ್ನು ಇತರೆ ಕಾಮಗಾರಿಗಳಿಗೆ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತೂಗು ಸೇತುವೆ, ಕಾಲುಸಂಕ, ಶಾಲಾ ಕಟ್ಟಡ ಅಭಿವೃದ್ಧಿ, ಮೀನು ಮಾರುಕಟ್ಟೆ ನಿರ್ಮಾಣ, ಒಣ ಮೀನು ಸಂಸ್ಕರಣೆಗೆ ಮಹಿಳೆಯರಿಗೆ ಅಗತ್ಯ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದೆಂದು ಸಚಿವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ಮಾತನಾಡಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನವನ್ನು ಹೇಗೆ ಯಾವ ರೀತಿಯಲ್ಲಿ ಬಳಸಬೇಕು ಎಂಬುವುದರ ಬಗ್ಗೆ ಸೂಕ್ತ ರೂಪರೇμÉಗಳನ್ನು ಒಳಗೊಂಡ ಮಾರ್ಗದರ್ಶನದ ಅವಶ್ಯಕತೆ ಇದ್ದು, ಈ ಸಂಬಂಧ ಆದೇಶ ಹೊರಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಮೂರು ಜಿಲ್ಲೆಗಳಲ್ಲಿ ಸ್ಥಳೀಯ ಬೇಡಿಕೆ ಹಾಗೂ ಅಗತ್ಯತೆ ಅಗತ್ಯತೆಗೆ ಅನುಗುಣವಾಗಿ ಹಲವು ವಿಭಿನ್ನ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು